ಕಾಡಾ ಅಧ್ಯಕ್ಷರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ

ಮಂಡ್ಯ ಜಿಲ್ಲೆಯ ಕಾಡಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಒತ್ತು
ಚಾಮರಾಜನಗರ: ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಡಾದಿಂದ ಕೈಗೊಂಡಿರುವ 60 ಲಕ್ಷ ರೂ. ವೆಚ್ಚದ ರಸ್ತೆಗಳ ಅಭಿವೃದ್ದಿ ಕಾಮಗಾರಿಯನ್ನು ಅಧಿಕಾರಗಳೊಂದಿಗೆ ತೆರಳಿ ಶುಕ್ರವಾರ ಪರಿಶೀಲನೆ ಮಾಡಿದರು.

ಮಂಡ್ಯ ಜಿಲ್ಲೆಯ ನಾಗಮಂಗಲ ರಸ್ತೆಯಿಂದ ಈಜರಗದ್ದೆ ಸೇರಿದ ರಸ್ತೆ ಅಭಿವೃದ್ದಿ ಕಾಮಗಾರಿ, ಕೋಡಿಕೊಪ್ಪಲು ಮಾರ್ಗದ ರಸ್ತೆ ಅಭಿವೃದ್ದಿ ಸೇರಿದಂತೆ ಕಾಡಾ ವ್ಯಾಪ್ತಿಯ ಜಮೀನುಗಳು ಹಾಗು ಕಾಲುವೆಗಳಿಗೆ ಸಂಪರ್ಕ ಕಲ್ಪಿಸುವ 60 ಲಕ್ಷ ರೂ. ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮೆಟ್ಲಿಂಗ್ ಕಾಮಗಾರಿಯನ್ನು ಕಾಡಾ ಅಧ್ಯಕ್ಷರು ಪರಿಶೀಲನೆ ಮಾಡಿ, ಗುಣಮಟ್ಟಕ್ಕೆ ಹೆಚ್ಚಿನ ಅಧ್ಯತೆ ನೀಡುವಂತೆ ಸೂಚನೆ ನೀಡಿದರು.

ಮಂಡ್ಯ ಜಿಲ್ಲೆಯ ನೀರಾವರಿ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ಜಲನಯನ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿ ಹೆಚ್ಚಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿಗಳಾ ಡಿ.ಕೆ. ಶಿವಕುಮಾರ್ ಅವರಿಗೆಮನವಿ ಸಲ್ಲಿಸಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನವನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದೇನ ಎಂದರು.

ಈ ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿ ದಿವಾಕರ್ ನಾಯಕ್, ಕಾರ್ಯಪಾಲಕ ಅಭಿಯಂತರ ದ್ರುವಕುಮಾರ್, ಸಹಾಯಕ ಅಭಿಯಂತರ ಸಾಬಾನ್ ಇತರರು ಇದ್ದರು.

Leave a Reply

Your email address will not be published. Required fields are marked *