ಪ್ರಧಾನಿ ಮೋದಿಗೆ ಅವಮಾನ : ಕಾಂಗ್ರೆಸ್‌ನವರ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ಮನವಿ

ಚಾಮರಾಜನಗರ:   ಪ್ರಧಾನಿ ನರೇಂದ್ರ ಮೋದಿಯವರಿಗೆ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ,
ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ
ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಗರದ ಜಿಲ್ಲಾಧಿಕಾರಿ ಶ್ರೀರೂಪ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
   ಕಾಂಗ್ರೆಸ್ ನ ನಾಯಕರಾದ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋದ ಸಂದರ್ಭದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕುರಿತು ತನ್ನ ಅವಹೇಳನಕಾರಿ ಮಾತುಗಳಿಂದ ಅವಮಾನಿಸುತ್ತಾ ಬಂದಿದ್ದಾರೆ. ಕಳೆದ ವಾರ ಲೋಕಸಭೆಯಲ್ಲಿ ಅಧಿವೇಶನ ನಡೆಯುತ್ತಿದ್ದಾಗ ರಾಹುಲ್ ಗಾಂಧಿಯವರು ತಮ್ಮ ಪಕ್ಷದ ಮಹಿಳಾ ಸಂಸದರ ಮೂಲಕ ಪ್ರಧಾನ ಮಂತ್ರಿ ಅವರಿಗೆ ದೈಹಿಕವಾಗಿ ಹಲ್ಲೆ ನಡೆಸಲು ಷಡ್ಯಂತ್ರವನ್ನು ರೂಪಿಸಿತ್ತು. ಎಂದು ಪತ್ರಿಕೆಗಳಲ್ಲಿ ವರದಿ ಆಗಿವೆ. ಹಾಗೆಯೇ ಕಾಂಗ್ರೆಸ್ ನ ನಾಯಕರು ರೂಪಿಸಿರುವ ಸಂಚಿನ ಭಾಗವಾಗಿ ಫೆ.8 ರಂದು ಕರ್ನಾಟಕ ಯೂತ್ ಕಾಂಗ್ರೆಸ್ ನ ಪದಾಧಿಕಾರಿಗಳು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಳಸಿ ದೇಶದ ಸಂಸತ್ತಿಗೆ ಬರಲು ಧೈರ್ಯವಿಲ್ಲದ ಪುಕ್ಕಲ ದೇಶವನ್ನು ಹೇಗೆ ರಕ್ಷಿಸುತ್ತಾರೆ? ಎಂಬ ಸುಳ್ಳು ಸುದ್ದಿಯ ಬ್ಯಾನರನ್ನು ವಿಧಾನ ಸೌಧದ ಮುಂದೆ ಹಾಕಿರುತ್ತಾರೆ.
ದೇಶದ ಆರ್ಥಿಕತೆಯನ್ನು ಜಾಗತಿಕ ಮಟ್ಟದಲ್ಲಿ 5ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ತರಲು ಅಪರೇಷನ್ ಸಿಂಧೂರ್ ಅಂತಹ ಐತಿಹಾಸಿಕ ತರಲು ಹಗಲಿರುಳು ಶ್ರಮಿಸುತ್ತಿರುವ ಮತ್ತು ಕಾರ್ಯಾಚರಣೆಯ ನಿರ್ಧಾರ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅವಮಾನಿಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಕಾರ್ಯಕರ್ತರ ನಡೆಯನ್ನು ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಹಾಗೂ ದೇಶದ ಪ್ರಧಾನಿಗಳನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಮೋರ್ಚಾದ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್,
ಮಹಿಳಾ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಶೈಲಾ, ಉಪಾಧ್ಯಕ್ಷರಾದ ಮಮತಬಾಲಸುಬ್ರಹ್ಮಣ್ಯಂ, ಪಾರ್ವತಮ್ಮ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಜಯಶೀಲರಾಜಶೇಖರ್ ಹಾಜರಿದ್ದರು.

Leave a Reply

Your email address will not be published. Required fields are marked *