ಚಾಮರಾಜನಗರ: ಅಕ್ಟೋಬರ್ 24, 25ರಂದು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿದೆ ಎಂದು ಕೊಳ್ಳೇಗಾಲ ಶಾಸಕರು ಹಾಗೂ ಸಮ್ಮೇಳನದ ಅಧ್ಯಕ್ಷರಾದ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಕಳೆದ ಮೊದಲ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆದಿತ್ತು. ಚಾಮರಾಜನಗರದಲ್ಲಿ ಎರಡನೇ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದರು.
ಈ ಸಮ್ಮೇಳನದಲ್ಲಿ ಧಮ್ಮ ಕವಿಗೋಷ್ಠಿ, ಮಕ್ಕಳ ಮೈತ್ರಿ, ಮಹಿಳಾ ದುಂಡುಮೇಜಿನ ಸಭೆಗಳು, ಸಂವಾದ ಸೇರಿದಂತೆ ಕಲಾತಂಡಗಳಿ0ದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಅಕ್ಟೋಬರ್ 24 ರಂದು ಬೆಳಗ್ಗೆ 7ಕ್ಕೆ ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪುತ್ಥಳಿ ಮುಂಭಾಗ ದಮ್ ನಡಿಗೆ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡುವರು ಎಂದರು.
ಕೊಲAಬೋ ವಿಶ್ವ ವಿದ್ಯಾನಿಲಯದ ಶೀಲವಂತ ಮಹಾತೋರೋ ಬಂತೇಜಿ, ತಿ.ನರಸೀಪುರದ ನಳಂದ ಬೌದ್ಧವಿಹಾರದ ಬೋದಿರತ್ನ ಬಂತೇಜಿ ದೀಪ ಬೆಳಗಿಸಲಿದ್ದು, ಮನೋರಖ್ಖಿತ ಬಂತೇಜಿ ಧಮ್ಮ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆಳಗ್ಗೆ 11.30ಕ್ಕೆ ಬೌದ್ಧ ಸಮ್ಮೇಳನವನ್ನು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಭೀಮರಾವ್ ಯಶವಂತರಾವ್ ಅಂಬೇಡ್ಕರ್, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಅಕ್ಟೋಬರ್ 25ರ ಬೆಳಗ್ಗೆ 11.30ಕ್ಕೆ ಎರಡನೇ ದಿನದ ಸಮ್ಮೇಳನವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಲಿದ್ದಾರೆ. ಸಚಿವರು, ಶಾಸಕರುಗಳು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.
ಈ ಎರಡೂ ದಿನ ಹಲವಾರು ವಿಚಾರಗೋಷ್ಠಿಗಳು, ಸಂವಾದಗಳು, ದುಂಡುಮೇಜಿನ ಸಭೆಗಳು ನಡೆಯಲಿದ್ದು, ಕಲಾತಂಡಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿದ್ದು, ಈ ಸಮ್ಮೇಳನಕ್ಕೆ 1 ಲಕ್ಷಕ್ಕೂ ಹೆಚ್ಚು ಆಗಮಿಸುವ ನಿರೀಕ್ಷೆಯಿದೆ ಎಂದು ಶಾಸಕರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಬಾಲರಾಜು, ವೆಂಕಟರಮಣಸ್ವಾಮಿ (ಪಾಪು), ಶ್ರೀನಿವಾಸಗೌಡ, ವೀರಭದ್ರಸ್ವಾಮಿ ಸೇರಿದಂತೆ ಸುಮಾರು 18 ಕೋಮಿನ ಮುಖಂಡರುಗಳು ಭಾಗವಹಿಸಿದ್ದರು.