ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸ್ಮರಣೆ ಅಗತ್ಯ: ಬಾಗಳಿ ರೇವಣ್ಣ

ಚಾಮರಾಜನಗರ : ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆ ಅಗತ್ಯವಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಗಳಿರೇವಣ್ಣ ಹೇಳಿದರು.
ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾವಿರಾರು ಜನ ಹೋರಾಡಿದ್ದಾರೆ. ಅನೇಕರು ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದರು.
ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರ ಇತಿಹಾಸ ಓದಬೇಕು ಅವರ ತತ್ವ, ಆದರ್ಶ ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಅವರಂತೆ ದೇಶಕ್ಕೆ ಕೊಡುಗೆ ನೀಡಬೇಕು ಎಂದರು.
ಸನ್ಮಾನ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಂಕರ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಮಹೇಂದರ್‌, ಮಂಜುನಾಥ್‌, ಶಿಕ್ಷಕರಾದ ಮಹೇಂದರ್‌, ಜಿ.ಆರ್. ಸಿದ್ದೇಶ್, ಇಂದ್ರಾ, ಶಿವಕುಮಾ‌ರ್, ಭರತ್‌, ಸವಿತಾ ಗ್ರಾಮದ ಮುಖಂಡರು, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *