ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಜಿಲ್ಲಾ ಕೌಶಾಲ್ಯಾಭಿವೃದ್ದಿ ಕೇಂದ್ರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಜೂನ್ 19ರಂದು ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಚಾಮರಾಜನಗರ ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿವೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೋಮೊ, ಯಾವುದೇ ಟ್ರೇಡಿನ ಐಟಿಐ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಸ್ವ ವಿವರ ಅಂಕಪಟ್ಟಿಗಳ ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಮೇಳದ ವಿವರಗಳಿಗೆ ಮೊ.ಸಂ 8970932547, 9743904790 ಮತ್ತು 08226-224430 ಸಂಪರ್ಕಿಸಬಹುದು.
ಉದ್ಯೋಗ ಮೇಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಂ.ಆರ್. ಗಂಗಾಧರ್ ಅವರು ವಹಿಸುವರು. ಕುಲ ಸಚಿವರಾದ ಆರ್. ಲೋಕನಾಥ್, ಪ್ರೊ. ಜಿ.ವಿ. ವೆಂಕಟರಮಣ (ಮೌಲ್ಯಮಾಪನ) ಅವರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.