
ಚಾಮರಾಜನಗರ: ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು, ಜನದನಿ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು, ಉದ್ಯೋಗಮೇಳ ಆಯೋಜಕರಾದ ಕುಮಾರ್ ಉಪ್ಪಾರ್ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ ಹಾಗೂ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ, ಉದ್ಯೋಗ ಮೇಳಗಳ ಮೂಲಕ ಸಾವಿರಾರು ಯುವ ಸಮುದಾಯಕ್ಕೆ ಉದ್ಯೋಗವನ್ನು ಕಲ್ಪಿಸಿರುವವರು. ತಮ್ಮ ಜೀವನದಲ್ಲಿ ಭಗವಂತ ಆಯುರಾರೋಗ್ಯ ಐಶ್ವರ್ಯ ಕೊಟ್ಟು ಕರುಣಿಸಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ , ಸಮಾಜ ಸೇವೆಯನ್ನು ಮಾಡುವ ಶಕ್ತಿ ನಿಮಗೆ ದೊರೆಯಲಿ ಎಂದು ಹಾರೈಸುತ್ತಾ ಕನ್ನಡ ಫಿಲಂ ಚೇಂಬರ್ ವತಿಯಿಂದ ರಾಜ್ಯ ಮಟ್ಟದ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನಿಸಿ ಈ ಅಭಿನಂದನಾ ರಾಜ್ಯ ಪ್ರಶಸ್ತಿ ಪತ್ರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ.24 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಎಂ.ಎಸ್. ರವೀಂದ್ರ, ಉಪಾಧ್ಯಕ್ಷ ನರಸಿಂಹಯ್ಯ. ಪ್ರಧಾನ ಕಾರ್ಯದರ್ಶಿ ಆರ್ಯನ್ ರೆಡ್ಡಪ್ಪ , ಖಜಾಂಚಿ. ಡಾ. ವಿಜಯ್ ಎನ್. ಅಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.