ಕಾಗಲವಾಡಿಯಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಚಾಮರಾಜನಗರ: ತಾಲೂಕಿನ ಕಾಗಲವಾಡಿ ಗ್ರಾಮದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡನಾಡು, ನುಡಿಗಾಗಿ ಎಲ್ಲರೂ ಸಂಘಟಿತರಾಗಬೇಕು. ನಮ್ಮ ಅಸ್ಮಿತೆಯಾದ ಕನ್ನಡವನ್ನು ಉಳಿಸಿ-ಬೆಳೆಸಲು ನಾವೆಲ್ಲರೂ ಶ್ರಮಿಸಬೇಕು ಎಂದರು.

ಬಿಜೆಪಿ ಮುಖಂಡ ಬುಲೆಟ್ ಚಂದ್ರು ಮಾತನಾಡಿ, ಆಟೋ ಚಾಲಕರಿಂದ ಕನ್ನಡ ಬಾಷೆ ಮತ್ತು ಸಂಸ್ಕೃತಿ ಗಟ್ಟಿಯಾಗಿದೆ. ಕೇವಲ ಪ್ರಯಾಣಿಕರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ತಲುಪಿಸುವುದು ಮಾತ್ರವಲ್ಲದೆ ದಿನನಿತ್ಯದ ಬದುಕಿನಲ್ಲಿ ಕನ್ನಡದ ಕಂಪನ್ನು ಹರಡುವಲ್ಲಿ ಆಟೋ ಚಾಲಕರ ಪಾತ್ರ ಬಹಳ ದೊಡ್ಡದಾಗಿದೆ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ ಕುಮಾರ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ, ಆಟೋ ಚಾಲಕರು ಪ್ರತಿ ವರ್ಷ ನವೆಂಬರ್ ತಿಂಗಳು ರಾಜ್ಯಾದ್ಯಂತ ಆಟೋ ನಿಲ್ದಾಣಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಷೆಯಿಂದ ಆಚರಿಸುತ್ತಾರೆ. ಭುವನೇಶ್ವರಿದೇವಿಯ ಭಾವಚಿತ್ರವಿಟ್ಟು ಪೂಜಿಸುವುದು, ಅನ್ನದಾನ ಮಾಡುವುದು, ಕನ್ನಡ ಬಾವುಟವನ್ನು ಹಾರಿಸುವ ಮೂಲಕ ಭಾಷಾಭಿಮಾನವನ್ನು ಮೆರೆಯುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಜಿಲ್ಲಾ ಪ್ರಧಾ ಕಾರ್ಯದರ್ಶಿ ಮಹದೇವಶೆಟ್ಟಿ, ಕಾರ್ಯದರ್ಶಿ ಮೋಹನ್ ಕುಮಾರ್, ಸಹ ಕಾರ್ಯದರ್ಶಿ ನಿಂಗಶೆಟ್ಟಿ, ನಸ್ರುಲ್ಲಾ, ಸುಬಾನ್, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‌ಕುಮಾರ್‌ಶೆಟ್ಟಿ ಬಣದ ಪದಾಧಿಕಾರಿಗಳು, ಮುಖಂಡರಾದ‌ ಕಿರಣ್, ಗಣೇಶ, ಮರಿಸ್ವಾಮಿ, ಮಹದೇವಸ್ವಾಮಿ, ನಂಜುಂಡ, ಬಂಗಾರು, ರಾಮು, ಕುಮಾರ್, ಫಾಜಿಲ್‌ಪಾಷ, ಅಲ್ತಾಫ್ ಅಹಮದ್‌, ಜಯಶಂಕರಮೂರ್ತಿ, ನಟಶೇಖರಮೂರ್ತಿ, ಪೋಲಿಸ್ ಇಲಾಖೆಯ ಸುಂದ್ರಪ್ಪ, ಸಿದ್ರತ್ ಉಲ್ಲಾ, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿ ಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *