ಚಾಮರಾಜನಗರ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು 60ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಲಾಯಿತು.ನಂತರ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಅನ್ನಸಂತರ್ಪಣೆ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎನ್.ಮಂಜೇಶ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಟಿ.ಎ.ನಾರಾಯಣಗೌಡರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎನ್.ಮಂಜೇಶ್ ಮಾತನಾಡಿ, ನಮ್ಮ ನೆಚ್ಚಿನ ನಾಯಕರಾದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ 60ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಆರ್ಚನೆ ಮಾಡಿ ವಿಶೇಷಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅವರು ನಾಡು, ನುಡಿ, ಜಲಕ್ಕಾಗಿ ಕಳೆದ 27 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಭಗವಂತ ಹೆಚ್ಚಿನ ಆರೋಗ್ಯ, ಆಯಸು ಕರುಣಿಸಿ ಅವರ ಹೋರಾಟಕ್ಕೆ ಹೆಚ್ಚಿನ ಶಕ್ತಿ ತುಂಬಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೂಪೇಶ್, ಸಹ ಕಾರ್ಯದರ್ಶಿ ಅರ್ಜುನ್. ಸಂಘಟನಾ ಕಾರ್ಯದರ್ಶಿ ಹೇಮಂತ್, ಉಪಾಧ್ಯಕ್ಷ ರಾಜೇಂದ್ರನಾಯಕ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ರಮೇಶ್‌ನಾಯಕ, ಚಾಮರಾಜನಗರ ತಾಲೂಕು ಅಧ್ಯಕ್ಷ ಸಂತೋಷ್, ಉಪಾಧ್ಯಕ್ಷ ಸುಂದರ್, ಮಹಿಳಾ ಜಿಲ್ಲಾಧ್ಯಕ್ಷೆ ಭಾಗ್ಯಲಕ್ಷ್ಮಿ, ತಾಲೂಕು ಅಧ್ಯಕ್ಷ ಸುಮಾ, ಕೊಳ್ಳೇಗಾಲ ತಾಲೂಕು ಮೆಹಬೂಬುಪಾಷ, ಯಳಂದೂರು ತಾಲೂಕು ಅಧ್ಯಕ್ಷ ಮಹದೇವಸ್ವಾಮಿ, ಇಸ್ಮಾಯಿಲ್, ಅಭಿಷೇಕ್, ಸೈಯದ್, ಮಹೇಶ್ ಮಾದಾಪುರ ಇತರರು ಹಾಜರಿದ್ದರು.