
ಕೆ.ಆರ್.ನಗರ : ಕರ್ನಾಟಕ ಸಂಪಾದಕರ ಮತ್ತು ವರದಿಗಾರರ ಸಂಘವು ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲ್ಲೂಕು ಒಳಗೊಂಡ ನೂತನ ಘಟಕವು ಅಸ್ತಿತ್ವಕ್ಕೆ ಬಂದಿದೆ.
ಸಾಲಿಗ್ರಾಮ ಹಾಗೂ ಕೆ.ಆರ್.ನಗರ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ.
ಅಧ್ಯಕ್ಷರಾಗಿ ಕುಪ್ಪೆ ಮಹದೇವಸ್ವಾಮಿ, ಉಪಾಧ್ಯಕ್ಷರಾಗಿ ಸಿ.ವೈ.ಅಭಿಲಾಷ್, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಟಿ.ಮೋಹನ್ ಕುಮಾರ್, ಕಾರ್ಯದರ್ಶಿಯಾಗಿ ಕೆ.ಎನ್.ತುಳಸೀಕುಮಾರ್, ಸಹ ಕಾರ್ಯದರ್ಶಿಯಾಗಿ ಎಂ.ಪಿ.ಮಂಜುನಾಥ್, ಖಜಾಂಚಿಯಾಗಿ ಕೆ.ಆರ್.ಶ್ಯಾಮ್ ಸುಂದರ್, ಸಂಘಟನಾ ಕಾರ್ಯದರ್ಶಿಗಳಾಗಿ ಎಸ್.ಲೋಕೇಶ್, ಎಂ.ಎಸ್.ನರಸಿಂಹ, ಎಸ್.ಬಿ.ಬಸವರಾಜು, ಸಂಚಾಲಕರಾಗಿ ಹರ್ಷವರ್ಧನ್ ಅವರುಗಳು ಆಯ್ಕೆಯಾಗಿದ್ದಾರೆ.