ಚಾಮರಾಜನಗರ: ತಾಲೂಕಿನ ಮೇಲೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಜಿಲ್ಲಾಧ್ಯಕ್ಷ ಅಜಯ್ ಅರಕಲವಾಡಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಸಂಖ್ಯಾತ ಜನರ ಹೋರಾಟ ತ್ಯಾಗ, ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಕರ್ನಾಟಕವು ಸ್ವಾತಂತ್ರ್ಯ. ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು.
ಸರ್ಕಾರಿ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ, ಇಂಗ್ಲಿಷ್ ಶಿಕ್ಷಣ ದೊರೆಯುತಿದೆ. ಆಗಾಗಿ ಸರ್ಕಾರಿ ಶಾಲೆಗೆ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ನೋಟ್‌ಪುಸ್ತಕ, ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಸಂತೋಷ್, ನಾಗಮಲ್ಲಪ್ಪ, ಪ್ರಸಾದ್, ವಿನೋದ್, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ಜಗದೀಶ್, ಮಧು ಇತರರು ಹಾಜರಿದ್ದರು.
