ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

  • ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಶ್ರೀನಿವಾಸಗೌಡ ಆಗ್ರಹ

ಚಾಮರಾಜನಗರ: ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಖ್ಯ ಗೇಟ್ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಈಡೇರಿಸಿ, ಈಡೇರಿಸಿ,ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಿ ಎಂದು ಘೋಷಣೆ ಕೂಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ಆಶಾಕಾರ್ಯಕರ್ತೆಯರ ಬೇಡಿಕೆಗಳನ್ನು ಸಮಗ್ರವಾಗಿ ಈಡೇರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸದೆ ಇರುವುದು ಅಗೌರವವಾಗಿದ್ದು, ಅತ್ಯಂತ ನಾಚಿಗೇಡಿನ ಸಂಗತಿಯಾಗಿದೆ. ಆಶಾಕಾರ್ಯಕರ್ತೆಯರು ಕಳೆದ ಒಂದು ವಾರದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹೋರಾಟ ಮಾಡುತ್ತಿದ್ದಾರೆ.ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೆ. ನಿಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸರ್ಕಾರ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪ್ರಮುಖ ಕಾರಣಕರ್ತರು ಆಶಾಕಾರ್ಯಕರ್ತೆಯರು. ಅದಕ್ಕಾಗಿ ಅವರ ನ್ಯಾಯಯುತ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಣ್ಯದಹುಂಡಿರಾಜು, ನಿಜಧ್ವನಿಗೊವಿಂದರಾಜು, ಮಹೇಶ್‌ಗೌಡ, ಅರುಣ್‌ಕುಮಾ‌ರ್ ಗೌಡ, ರಾಚಪ್ಪ, ಆಟೋ ಲಿಂಗರಾಜು, ಮುತ್ತುರಾಜು, ಪಾರ್ಕ್ ನಾಗರಾಜು, ತಾಂಡವಮೂರ್ತಿ, ವೀರಭದ್ರ, ಅಮಚವಾಡಿ ರಾಜು, ಶಿವು, ಕುಮಾ‌ರ್ ತಮಿಳು ಸಂಘದ ಜಗದೀಶ್‌, ಸುಬ್ರಹ್ಮಣ್ಯ, ಸೋಮವಾರಪೇಟೆ ಮಂಜು, ನಾಗೇಂದ್ರಗೌಡ, ಭೂಪತಿ ಇತರರು ಭಾಗವಹಿಸಿದ್ದರು

Leave a Reply

Your email address will not be published. Required fields are marked *