ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ  ಹುಟ್ಟುಹಬ್ಬ: ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ

ಚಾಮರಾಜನಗರ: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ  ಅವರ ಹುಟ್ಟುಹಬ್ಬ ಅಂಗವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.
ಜಿಲ್ಲಾಧ್ಯಕ್ಷ ಅಜಯ್ ಅರಕಲವಾಡಿ ಅವರ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಸ್ಥಾನ ಚಂದನಗೌಡ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಸಲ್ಲಿಸಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ಅಜಯ್ ಅರಕಲವಾಡಿ ಮಾತನಾಡಿ, ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಭೂಮಿಪುತ್ರ ಚಂದನಗೌಡ  ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಘಟಕದ ವತಿಯಿಂದ
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ,ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಚಂದನಗೌಡ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಿ ಕರಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಮಹದೇವಪ್ಪ, ಅನಿಲ್, ಮನೋಜ್, ಲೋಕೇಶ್, ಮಂಜು, ವಿನೋದ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *