ಚಾಮರಾಜನಗರ: ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಅವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದು, ಆಯೋಗದ ವ್ಯಾಪ್ತಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬರುವ 14 ಇಲಾಖೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆ, ಸಮಸ್ಯೆ, ದೂರುಗಳಿದ್ದಲ್ಲಿ ಆಯೋಗದ ಅಧ್ಯಕ್ಷರಿಗೆ ತಿಳಿಸಬಹುದಾಗಿದೆ.
ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಅವರು ಚಾಮರಾಜನಗರ ಜಿಲ್ಲೆಗೆ ಮೂರು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಆಯೋಗದ ವ್ಯಾಪ್ತಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ (ಅಂಗನವಾಡಿ ಪೌಷ್ಠಿಕಾಂಶ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಮಧ್ಯಾಹ್ನದ ಬಿಸಿಯೂಟ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ನಗರಾಭಿವೃದ್ದಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (ವಸತಿ ಯೋಜನೆ), ಕೃಷಿ ಇಲಾಖೆ, ಸಹಕಾರ ಇಲಾಖೆ (ಪರಿಕರ ವಿತರಣಾ ಸಂಸ್ಥೆಗಳು) ಇಲಾಖೆಗಳು ಬರಲಿವೆ.
ಆಹಾರ ಭದ್ರತಾ ಕಾಯ್ದೆ ಫಲಾನುಭವಿಗಳಿಗೆ ಈ ಇಲಾಖೆಗಳು ಪಡಿತರ, ಪೌಷ್ಠಿಕ ಆಹಾರ, ಬಿಸಿಯೂಟ ಒದಗಿಸುವ ಜವಾಬ್ದಾರಿಯು ಹೊಂದಿವೆ. ಸಂಬಂಧಪಟ್ಟ ಇಲಾಖೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆ, ಅಹವಾಲುಗಳು, ಸಮಸ್ಯೆ ದೂರುಗಳಿದ್ದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಹೆಚ್. ಕೃಷ್ಣ ಅವರ ಗಮನಕ್ಕೆ ತರಬಹುದಾಗಿದೆ. ಆಯೋಗದ ಅಧ್ಯಕ್ಷರಾದ ಡಾ. ಕೃಷ್ಣ ಅವರ ಮೊ.ಸಂ 9448466099 ಆಗಿದ್ದು ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸುವಂತೆ ಕೋರಲಾಗಿದೆ.
Like this:
Like Loading...
Related