ಮೈಸೂರು: ಸಮಾಜದಲ್ಲಿ ಉತ್ತಮ ಕಾರ್ಯ ಮಾಡುವವರನ್ನು ಗುರುತಿಸಿ ಗೌರವಿಸುವುದು ಕೂಡ ರಾಷ್ಟ್ರ ನಿರ್ಮಾಣದ ಒಂದು ಪ್ರಮುಖ ಕಾರ್ಯವಾಗಿದೆ ಎಂದು ಚಲನಚಿತ್ರ ನಟ ಶಂಕರ್ ಅಶ್ವಥ್ ಹೇಳಿದರು.
ಅವರು ಮೈಸೂರು ನಗರದ ರೋಟರಿ ಭವನದಲ್ಲಿ ಕರುನಾಡ ದೀಪ ಸೇವಾ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ಷೇತ್ರಗಳ ನಾಡಿನ ಸಾಧಕರುಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರ್ಯವೆಂದರೆ ಕೇವಲ ಬಂಧನಗಳಿಂದ ಮುಕ್ತಿಯಾಗುವುದಲ್ಲ, ಪ್ರತಿಯೊಬ್ಬ ನಾಗರೀಕರು ತನ್ನ ಕರ್ತವ್ಯ, ಜವಾಬ್ದಾರಿ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವುದರ ಜೊತೆಗೆ, ಇಂದಿನ ಪೀಳಿಗೆ ದೇಶದ ಸ್ವಾತಂತ್ರ್ಯದ ಮೌಲ್ಯವನ್ನು ಅರಿತು ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಹೊಂದಿದೆ ಎಂದರು.
ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ, ವೈದ್ಯಕೀಯ, ಆರೋಗ್ಯ, ಸಂಘಟನೆ, ಇಂಜಿನಿಯರಿಂಗ್, ಅರಣ್ಯ, ಕೃಷಿ, ಧಾರ್ಮಿಕ, ಆಡಳಿತ, ಉದ್ಯಮ, ಕಲೆ-ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 19 ಸಾಧಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಾದಳ್ಳಿ ಉಕ್ಕಿನ ಕಂತೆ ಮಠದ ಶ್ರೀ ಸಾಂಬ ಸದಾಶಿವ ಸ್ವಾಮೀಜಿ ಅವರು ವಹಿಸಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸೋಮಶೇಖರ್ ಮಾತನಾಡಿ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲೆಮರೆಯ ಕಾಯಿಯಂತೆ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವವರನ್ನು ಗುರುತಿಸಿ ಗೌರವಿಸುವ ಮೂಲಕ ಅವರಿಗೆ ಮತ್ತಷ್ಟು ಪ್ರೇರಣೆ ನೀಡುವಂತಹ ಕೆಲಸ ಮಾಡುತ್ತಿರುವ ಕರುನಾಡ ದೀಪ ಸೇವಾ ಟ್ರಸ್ಟ್ ನ ಕಾರ್ಯವು ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು.
ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಸಂಸ್ಥೆ ವತಿಯಿಂದ ವಿವಿಧ ಸಾಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು ಪ್ರಸ್ತುತ ಸಾಲಿನಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳು, ಆರೋಗ್ಯ, ಶಿಕ್ಷಣ, ಸಾಮಾಜಿಕ ಸೇವಾ ಕಾರ್ಯಗಳು, ವಿವಿಧ ದಿನಾಚರಣೆಗಳು, ಜಯಂತಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನ ಗುರುತಿಸಿ ಅವರನ್ನು ಅಭಿನಂದಿಸುವಂತಹ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಲು ಉದ್ದೇಶಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟಿ ಕಾವ್ಯ, ನಂಜನಗೂಡು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕರಳಾಪುರ ನಾಗರಾಜು, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ
ಕೆ.ಆರ್.ಶ್ಯಾಮಸಂದರ್, ನಿರ್ದೇಶಕ ಎಂ.ಎಸ್.ನರಸಿಂಹ, ಯುವರಾಜ ಕಾಲೇಜು ಪ್ರಾಂಶುಪಾಲ
ಡಾ.ಅಜಯ್ ಕುಮಾರ್, ನಿವೃತ್ತ ಪ್ರಾಂಶುಪಾಲ ಡಾ.ಎಂ.ಗೋವಿಂದರಾಜು, ಮುಖ್ಯ ಶಿಕ್ಷಕರಾದ ಹೆಚ್.ಪಿ.ಲೋಕೇಶ್, ಎಂ.ಪಿ.ಶಿವಶಂಕರ್, ನಗರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಆರ್.ವಿನೋದ್ ಉಪ್ಪಾರ್, ಆಡಿಟರ್ ಪ್ರಕಾಶ್, ಯುವ ಮುಖಂಡರಾದ ಕೆ.ಎಲ್.ಲೋಕೇಶ್, ಪ್ರದೀಪ್, ಯೋಗೇಶ್ ಕುಮಾರ್, ಟಿ.ಎನ್.ಶಿವರಾಜ್ ಸೇರಿದಂತೆ ಹಲವರು ಇದ್ದರು.
ಸನ್ಮಾನಿತ ಸಾಧಕರುಗಳು: ನಂಜುಂಡಸ್ವಾಮಿ,
ನಂದಿನಿರಮೇಶ್,
ಹೆಚ್.ಎನ್.ರಮೇಶ್, ಎಸ್.ಸೋಮು, ಮಹದೇವ,
ಕೆ.ಬಿ.ಪರಮೇಶ್, ಉಮೇಶ್ ಪೂಜಾರಿ, ಆರ್.ಏ.ಮಹೇಶ್,
ಕೆ.ಸಿ.ಪ್ರತಾಪ್ ಕುಮಾರ್, ಗೌರಮ್ಮ, ಸಂಜಯ್, ನಂಜುಂಡಸ್ವಾಮಿ,
ಕೆ.ಎಸ್.ಶೇಖರ್,
ಎ.ರಾಜು, ಎನ್.ಜೆ.ಸ್ವಾಮಿ, ರವಿಕುಮಾರ್, ಕುಮಾರ್, ಪಪ್ಪಾಯಿ ಆನಂದ್, ಕೇಬಲ್ ರಾಮು ಅವರುಗಳನ್ನು ಸಮಾರಂಭದಲ್ಲಿ ಅಭಿನಂದಿಸಲಾಯಿತು.
