ಮೈಸೂರು: ಕರುನಾಡ ದೀಪ ಸೇವಾ ಟ್ರಸ್ಟ್ ವತಿಯಿಂದ ಮೈಸೂರು ನಗರದ ರೋಟರಿ ಭವನದಲ್ಲಿ ಆಯೋಜಿಸಿದ್ದ ವಿವಿಧ ಕ್ಷೇತ್ರಗಳ ನಾಡಿನ ಸಾಧಕರುಗಳಿಗೆ ಅಭಿನಂದನಾ ಸಮಾರಂಭದಲ್ಲಿ ನಂಜನಗೂಡು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕರಳಾಪುರ ನಾಗರಾಜು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾದಳ್ಳಿಯ ಉಕ್ಕಿನ ಕಂತೆ ಮಠದ ಶ್ರೀ ಸಾಂಬ ಸದಾಶಿವ ಮಹಾಸ್ವಾಮೀಜಿ, ಚಲನಚಿತ್ರ ನಟ ಶಂಕರ್ ಅಶ್ವಥ್, ಕರುನಾಡ ದೀಪ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್, ಚಿತ್ರನಟಿ ಕಾವ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸೋಮಶೇಖರ್, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ
ಕೆ.ಆರ್.ಶ್ಯಾಮಸುಂದರ್, ನಿರ್ದೇಶಕ ಎಂ.ಎಸ್.ನರಸಿಂಹ, ಮೈಸೂರು ನಗರ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿ
ಆರ್.ವಿನೋದ್ ಉಪ್ಪಾರ್, ಮಹಿಳಾ ಮುಖಂಡರಾದ ಗೌರಮ್ಮ ಇದ್ದರು.
