- ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ
ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು.
ಕರ್ನಾಟಕ ಬಂದ್ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್ ಸಂಪೂರ್ಣ ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್‌ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್ ಅಹಮದ್, ನಾಸೀರ್‌ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು.