ಅಂತರಾಷ್ಟ್ರೀಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಕಾವೇರಿ ಶಿವಕುಮಾರ್ ಬಂಡಿಗೆರೆ ಆಯ್ಕೆ

ಚಾಮರಾಜನಗರ: ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೊಡಲ್ಪಡುವ ಅಂತರಾಷ್ಟ್ರೀಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಜಿ.ಪಂ.ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಕಾವೇರಿ ಶಿವಕುಮಾರ್ ಬಂಡಿಗೆರೆ ಭಾಜನರಾಗಿದ್ದಾರೆ.
ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ  ಜು.12 ರಂದು ನಡೆಯುವ
ಅಂತರಾಷ್ಟ್ರೀಯ ಮಟ್ಟದ ಬೆಳಕು ಸಮ್ಮೇಳನದಲ್ಲಿ ಕಾವೇರಿ ಶಿವಕುಮಾರ್ ಅವರಿಗೆ ಅಂತರಾಷ್ಟ್ರೀಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅವರು ಸಾಮಾಜಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಸೇವೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಗೆ ಆಯ್ಕೆಯಾದ ಕಾವೇರಿ ಶಿವಕುಮಾರ್ ಅವರನ್ನು ಬೆಳಕು ಸಂಸ್ಥೆಯ ಚಾಮರಾಜನಗರದ ಜಿಲ್ಲಾಧ್ಯಕ್ಷ ಜ. ಸುರೇಶ್ ನಾಗ್ಅಭಿನಂದನೆ ತಿಳಿಸಿದ್ದಾರೆ

Leave a Reply

Your email address will not be published. Required fields are marked *