ಕೇಂದ್ರ ಜಿಲ್ಲಾ ಸಲಹಾ ಸಮಿತಿ ಸದಸ್ಯರಾಗಿ ಕೆಲ್ಲಂಬಳ್ಳಿ ಆನಂದಸ್ವಾಮಿ ನೇಮಕ

ಚಾಮರಾಜನಗರ: ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನ ಸಂಸ್ಥೆಯಾಗಿರುವ ಚಾಮರಾಜನಗರ ಜಿಲ್ಲೆಯ ನೆಹರು ಯುವ ಕೇಂದ್ರದ ಜಿಲ್ಲಾ ಸಲಹಾ ಸಮಿತಿ (ಆಂಅಙP) ಸದಸ್ಯರಾಗಿ ಕೆಲ್ಲಂಬಳ್ಳಿ ಆನಂದಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಭಾರತೀಯ ಜನತಾ ಪಕ್ಷದ ಸಾಮಾಜಿಕ ಜಾಲತಾಣ ಲೋಕಸಭಾ ಸಂಚಾಲಕ ಕೆಲ್ಲಂಬಳ್ಳಿ ಆನಂದ ಸ್ವಾಮಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲೆಯಲ್ಲಿ ನೆಹರು ಯುವ ಕೇಂದ್ರ ಮೂಲಕ ಯುವಕರನ್ನು ಸಂಘಟಿಸಿ, ಕೇಂದ್ರ ದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಲಾಗಿದೆ.

Leave a Reply

Your email address will not be published. Required fields are marked *