- ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಕಲ್ಲಿಸಲು ಒತ್ತಾಯ
ಚಾಮರಾಜನಗರ : ತಾಲೂಕಿನ ಮರಿಯಾಲದಿಂದ ಕೆಲ್ಲಂಬಳ್ಳಿಯ ರಸ್ತೆಯನ್ನು ಶೀಘ್ರ ದುರಸ್ಥಿಪಡಿಸುವಂತೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆಂಬಳ್ಳಿ ರಾಜೇಶ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಮರಿಯಾಲ ಗ್ರಾಮದಿಂದ ಕೆಲ್ಲಂಬಳ್ಳಿ ಗ್ರಾಮದವರೆಗಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮರಿಯಾಲ ಗ್ರಾಮದಲ್ಲಿ ಕಾಲೇಜು, ಆಸ್ಪತ್ರೆಗಾಗಿ ದಿನನಿತ್ಯ ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜವಿಕರ ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಿದ್ದಾರೆ. ಶೀಘ್ರದಲ್ಲೇ ಹದಗೆಟ್ಟಿರುವ ರಸ್ತೆಯನ್ನು ದುರಸ್ಥಿಪಡಿಸಿ ಸಾರ್ವಜನಿಕರಿಗೆ ಅನುಕೂಲ. ಮಾಡಿಕೊಡಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.
ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ : ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಇಲ್ಲದೆ ತುಂಬಾ ತೊಂದರೆ ಉಂಟಾಗಿದೆ. ಕೂಡಲೇ ರಸ್ತೆ ದುರಸ್ಥಿಡಿಸಬೇಕು. ರಾತ್ರಿಯ ಪಾಳಿಯಲ್ಲಿ ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಅವರ ಸುರಕ್ಷತಾ ದೃಷ್ಠಿಯಿಂದ ಒಂದು ಪೋಲಿಸ್ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು. ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು, ಅಲ್ಲಿನ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಿಸುವ ಕೆಲಸ ಆಗಬೇಕು ಎಂದು ಕೆಲ್ಲಂಬಳ್ಳಿ ರಾಜೇಶ್ ಸರ್ಕಾರವನ್ನು ಒತ್ತಾಯಿಸಿದರು.