ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ ಕೆಲ್ಲಂಬಳ್ಳಿ ಸೋಮಶೇಖರ್ , ನಾಗೇಂದ್ರನಾಯಕ ನೇಮಕ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಜಿಲ್ಲಾ ಪ್ರಧಾನ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಸೇವೆ ಸಲ್ಲುತ್ತಿದ್ದ ಕೆಲ್ಲಂಬಳ್ಳಿ ಸೋಮಶೇಖರ್, ಹಾಗೂ ನಾಗೇಂದ್ರನಾಯಕ ಅವರನ್ನು ನೇಮಕ ಮಾಡಿ ಪಕ್ಷದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ಹ್ಯಾರೀಸ್ ನಲಪಾಡ್ ಬೆಂಗಳೂರಿನಲ್ಲಿ ಆದೇಶ ಪ್ರತಿಯನ್ನು ನೀಡಿದರು.

ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯ ದೃಷ್ಟಿಯಿಂದ ಇಬ್ಬರನ್ನು ಜಿಲ್ಲೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ಕರ್ನಾಟಕ ಪ್ರದೇಶ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರೀಶ್ ನಲಪಾಡ್‍ರವರು ಮತ್ತು ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳವರ ಒಪ್ಪಿಗೆ ಮೇರೆಗೆ ನಿಮ್ಮನ್ನು ನೇಮಕ ಮಾಡಲಾಗಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ತಮಗೆ ವಹಿಸಿರುವ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಜಿಲ್ಲಾ ವ್ಯಾಪ್ತಿಯಲ್ಲಿ ಮುÀ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಘಟಿಸಿ, ಬಲಿಷ್ಠಗೊಳಿಸಲು ಶ್ರಮಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಕೆಲ್ಲಂಬಳ್ಳಿ ಸೋಮಶೇಖರ್ 2011 ರಿಂದಲು ಸತತವಾಗಿ ಅಂತರಿಕ ಚುನಾವಣೆಯಲ್ಲಿ ಆಯ್ಕೆಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈಗ ಇವರ ಸಂಘಟನೆಯನ್ನು ಗುರುತಿಸಿ ರಾಜ್ಯಾಧ್ಯಕ್ಷ ನಲಪಾಡ್ ಅವರು ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊಡಿಸಿದ್ದಾರೆ.

Leave a Reply

Your email address will not be published. Required fields are marked *