ಚಾಮರಾಜನಗರ: ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಕೆಪಿಸಿಸಿಯಿಂದ ಲೋಕಸಭಾ ಕ್ಷೇತ್ರವಾರು ಮಾಧ್ಯಮ ಸಂಯೋಜಕರನ್ನು ನೇಮಕ ಮಾಡಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಧ್ಯಮ ಸಂಯೋಜಕರಾಗಿ ಜಿ.ಪಂ. ಮಾಜಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್ ಅವರನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸುವ ಗುರುತಾರ ಜವಾಬ್ಧಾರಿಯ ಕಾಂಗ್ರೆಸ್ ಪಕ್ಷದ್ದಾಗಿದೆ.
ಈ ನಿಟ್ಟಿನಲ್ಲಿ ಕಾಂಗ್ರೆಸ್ ಮಾಧ್ಯಮ ಸಂಯೋಜಕರನ್ನಾಗಿ ನಿಮ್ಮನ್ನು ನೇಮಕ ಮಾಡಿದ್ದು, ಕ್ಷೇತ್ರಾದ್ಯಂತ ಪ್ರವಾಸ ಮಾಡುವ ಜೊತೆಗೆ ಮಾಧ್ಯಮದ ಮೂಲಕ ಪಕ್ಷದ ಸಾಧನೆ ಮತ್ತು ಇತರೇ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ರಾಜ್ಯ ಕಮ್ಯೂನಿಕೇಷನ್ ಮತ್ತು ಸೋಷಿಯಲ್ ಮೀಡಿಯಾ ಛೇರ್ಮನ್ ಪ್ರಿಯಾಂಕ ಖರ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.