
ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿಯಾಗಿ ಕೆರೆಹಳ್ಳಿ ರೇವಣ್ಣ ನೇಮಕಗೊಂಡಿದ್ದಾರೆ
ಗುಂಡ್ಲುಪೇಟೆ ವಿಧಾನಸಭಾ ಶಾಸಕ ಹೆಚ್. ಎಂ ಗಣೇಶ್ ಪ್ರಸಾದ್ ಅವರ ಶಿಫಾರಸ್ಸಿನ ಮೇರೆಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ ಮರಿಸ್ವಾಮಿ ರವರ ಒಪ್ಪಿಗೆ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರ ಅನುಮೋದನೆಯನ್ನು ಪಡೆದು ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಚೇತನ್ ಕುಮಾರ್
ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುಳಿದ ಸಮುದಾಯಗಳ ಸಂಘಟನೆ ವಿಚಾರವಾಗಿ ಕಾರ್ಯೋನ್ಮುಖರಾಗುವಂತೆ ನೇಮಕಾತಿ ಆದೇಶಪತ್ರದಲ್ಲಿ ತಿಳಿಸಿದ್ದಾರೆ.