ಶಾಸಕ ಎ.ಆರ್.ಕೃಷ್ಣಮೂರ್ತಿ ಗೆ  ಸಚಿವ ಸ್ಥಾನ ನೀಡುವಂತೆ ಕೊಳ್ಳೇಗಾಲದ ಸೈಯದ್ ಮುಸ್ತೈದ್ ಒತ್ತಾಯ

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿಚ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರನ್ನು ಕೊಳ್ಳೇಗಾಲದ ಸೈಯದ್ ಮುಸ್ತೈದ್ ಒತ್ತಾಯಿಸಿದ್ದಾರೆ.
ಜಿಲ್ಲೆಯ ನಾಡಿಮಿಡಿತ ಅರಿತಿರುವ ಕೃಷ್ಣಮೂರ್ತಿ ಅವರು ಹಿರಿಯರು ಹಾಗೂ ಅನುಭವಿಗಳಾಗಿದ್ದು, ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ, ಕೊಳ್ಳೇಗಾಲ ಕ್ಷೇತ್ರದಿಂದ ಬಹುಮತದೊಂದಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರ ಹಿರಿತನ ಮತ್ತು ಅನುಭವವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಸೈಯದ್ ಮುಸ್ತೈದ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *