ಚಾಮರಾಜನಗರ: ಕೆ.ಪಿ.ಎಸ್.ಸಿ ಪರೀಕ್ಷೆಯಲ್ಲಿ ಆಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಾರಿಯ ಕೆ.ಪಿ.ಎಸ್.ಸಿ ಯ
ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಕಳೆದ ಎರಡು ದಿನಗಳಿಂದ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಇದರ ಬಗ್ಗೆ ಈಗಾಗಲೇ ಅವಕಾಶ ವಂಚಿತ ಅನೇಕ ವಿದ್ಯಾರ್ಥಿಗಳು ಇದರ ಸಂಬಂಧ ಸಂಶಯ ವ್ಯಕ್ತಪಡಿಸಿದ್ದಾರೆ ಮತ್ತು ಈ ವಿಚಾರವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಸಹ ಕೆ.ಪಿ.ಎಸ್.ಸಿ ಯಿಂದ ವರದಿ ಕೇಳಿದ್ದಾರೆ. ಇದರಿಂದ ಮೇಲ್ನೋಟಕ್ಕೆ ಇಲ್ಲಿ ಅಕ್ರಮವಾಗಿರುವುದು ಕಾಣುತ್ತದೆ. ಆದರಿಂದ ಕೆ.ಪಿ.ಎಸ್.ಸಿ ಪರೀಕ್ಷೆ ಬರೆದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಮತ್ತು ಅವರ ಮುಂದಿನ ಭವಿಷ್ಯ ನಿರ್ನಾಮವಾಗಿದೆ ಆದ್ದರಿಂದ ಈ ಸಾರಿ ನಡೆದಿರುವ ಕೆ.ಪಿ.ಎಸ್.ಸಿ ಪರೀಕ್ಷೆಯ ಅಕ್ರಮ ಬಗ್ಗೆ ತನಿಖರ ನಡೆಸಿ ಅರ್ಹ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಕೊಡಬೇಕು ಎಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಮಹಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಒತ್ತಾಯಿಸಿದ್ಧಾರೆ.
ಈ ಸಂದರ್ಭದಲ್ಲಿ ಪಣ್ಯದಹುಂಡಿ ರಾಜು, ಪರ್ವತರಾಜು, ರಾಚಪ್ಪ, ಪ್ರಕಾಶ್ ಮೂಡ್ಲುಪುರ ಇತರರು ಹಾಜರಿದ್ದರು.