ಸಂತೇಮರಹಳ್ಳಿ : ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಕೃತಿಕಾಗೆ ಇಲ್ಲಿನ ಲೋಟಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಪ್ರಸ್ತುತ ಶಾಲೆಯಲ್ಲಿ ೯ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕೃತಿಕಾಗೆ ಶಾಲಾ ಆಡಳಿತ ಮಂಡಳಿ ವತಿಯಿಂದ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ಕೃತಿಕಾ ಉತ್ತಮ ಪ್ರದರ್ಶನ ನೀಡಿ ಗೆಲುವು ಸಾಧಿಸಲಿ ಎಂದು ಶಾಲೆಯ ಶಿಕ್ಷಕ ವರ್ಗ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ವಿರೂಪಾಕ್ಷ, ಮುಖ್ಯ ಶಿಕ್ಷಕ ಶಿವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಸೋಮಶೇಖರ್, ತರಬೇತುದಾರ ಪವನಕುಮಾರ್ ಸೇರಿದಂತೆ ಶಿಕ್ಷಕರು, ಕೃತಿಕಾಳ ಪೋಷಕರು ಹಾಜರಿದ್ದರು.