ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕ – ಅಭಿನಂದಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ಅವರನ್ನು ನೇಮಕ ಮಾಡಿರುವುದು ಅತ್ಯಂತ ಸಂತಸದ ವಿಷಯ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ರವರು ಹಾಗೂ ಕೆಪಿಸಿಸಿ ಅಧ್ಯಕ್ಷರು, ರಾಜ್ಯ ನಾಯಕತ್ವಕ್ಕೆ ನಾನು ಹೃತ್ಪೂರ್ವಕ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯಕ್ಕೆ ನೀಡಿರುವ ಮಹತ್ವವನ್ನು ಇದು ಮತ್ತೊಮ್ಮೆ ಸಾಬೀತುಪಡಿಸಿದೆ. ದಲಿತ ಸಮುದಾಯದ ನಿಷ್ಠಾವಂತ ಕಾರ್ಯಕರ್ತರೊಬ್ಬರನ್ನು ಗುರುತಿಸಿ ಜಿಲ್ಲಾ ಅಧ್ಯಕ್ಷರಂತಹ ಮಹತ್ವದ ಜವಾಬ್ದಾರಿ ನೀಡಿರುವುದು ಪಕ್ಷದ ಸಾಮಾಜಿಕ ಬದ್ಧತೆಗೆ ಸಾಕ್ಷಿ. ಈ ಹಿಂದೆ ದಲಿತ ಸಮುದಾಯದ ಚಿಕ್ಕಲಿಂಗಮ್ಮ ಅವರು ಈ ಹುದ್ದೆಯನ್ನು ಅಲಂಕರಿಸಿದ್ದನ್ನು ಬಿಟ್ಟರೆ, ಇತ್ತೀಚಿನ ವರ್ಷಗಳಲ್ಲಿ ಈ ಸಮುದಾಯಕ್ಕೆ ಈ ಅವಕಾಶ ಸಿಕ್ಕಿರಲಿಲ್ಲ. ಈ ಕೊರತೆಯನ್ನು ನಮ್ಮ ಹೈಕಮಾಂಡ್ ಈಗ ನೀಗಿಸಿದೆ, ಇದಕ್ಕೆ ನನಗೆ ಅತೀವ ಖುಷಿಯಾಗಿದೆ.

ಕುಮಾರ್ ಕೊಪ್ಪ ಅವರು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದವರು. ಸಂಘಟನಾ ಚತುರತೆ, ಎಲ್ಲ ಸಮುದಾಯಗಳೊಂದಿಗೆ ಬೆರೆಯುವ ಗುಣ ಹಾಗೂ ಪಕ್ಷದ ಮೇಲಿನ ನಿಷ್ಠೆ ಅವರ ದೊಡ್ಡ ಶಕ್ತಿ. ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಿ ಸಂಘಟನೆಯಾಗಲಿದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ.

ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಗೂ ಪಕ್ಷದ ಹಿರಿಯನಾಗಿ ನಾನು ಕುಮಾರ್ ಕೊಪ್ಪ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಜೊತೆಗೆ ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಪಕ್ಷದ ಎಲ್ಲ ಮುಖಂಡರು, ಬ್ಲಾಕ್ ಅಧ್ಯಕ್ಷರು, ಎಲ್ಲಾ ಮುಂಚೂಣಿ ಘಟಕಗಳ ಕಾರ್ಯಕರ್ತರು ಒಗ್ಗಟ್ಟಾಗಿ ಅವರ ಬೆನ್ನಿಗೆ ನಿಂತು ಪಕ್ಷವನ್ನು ಮುನ್ನಡೆಸುತ್ತೇವೆ.

ಇನ್ನೊಮ್ಮೆ ನೂತನ ಜಿಲ್ಲಾಧ್ಯಕ್ಷ ಕುಮಾರ್ ಕೊಪ್ಪ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಮಂಡ್ಯದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಲಿ ಎಂದು ಹಾರೈಸುತ್ತೇನೆ.

  • ಎನ್. ಚಲುವರಾಯಸ್ವಾಮಿ
    ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು

Leave a Reply

Your email address will not be published. Required fields are marked *