ಚಾಮರಾಜನಗರದಲ್ಲಿ ಅದ್ದೂರಿ ಬಸವ ಜಯಂತೋತ್ಸವ

  • ಬಸವೇಶ್ವರರ ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತ : ಸುತ್ತೂರು ಶ್ರೀ
  • ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಭಾಗಿ.

ಚಾಮರಾಜನಗರ:  ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವ ಬಳಗಗಳ ಒಕ್ಕೂಟದ ವತಿಯಿಂದ  ಜಿಲ್ಲಾ ಮಟ್ಟದ ಬಸವ ಜಯಂತೋತ್ಸವ ನಗರದಲ್ಲಿ ನಾನಾ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಬಸವೇಶ್ವರ ಪುತ್ಥಳಿಗೆ ಸುತ್ತೂರು ಶ್ರೀಗಳು, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾರ್ಲಾಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ನಂತರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಹಿತ ಮಠಾಧೀಶರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಹೆಚ್.ಎಂ.ಗಣೇಶಪ್ರಸಾದ್, ಎಂ.ಆರ್.ಮಂಜುನಾಥ್ ಇತರ ಗಣ್ಯರು ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆ ಚಾಲನೆ ನೀಡಿದ ಸುತ್ತೂರು ಶ್ರೀವೀರಸಿಂಹಾಸನ ಮಠಾಧ್ಯಕ್ಷರಾದ ಶ್ರೀಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಜಗಜ್ಯೋತಿ ಬಸವೇಶ್ವರ ಚಿಂತನೆಗಳಲ್ಲಿ ಸರ್ವಕಾಲಕ್ಕೂ ಪ್ರಸ್ತುತ ವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮಾತನಾಡಿ, 12ನೇ ಶತಮಾನದ ಶ್ರೇಷ್ಠ ಸಮಾಜ ಸುಧಾರಕ ಬಸವಣ್ಣನವರು ಜಾತಿ, ಲಿಂಗ , ವರ್ಗ ತಾರತಮ್ಯವಿಲ್ಲದ ಸಮಾನತೆಯ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು ಎಂದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. 12 ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಸರ್ವರಿಗೂ ಸಮಾನತೆ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಚಾಮರಾಜನಗರ ವಿರಕ್ತಮಠದ ಸಿದ್ದಮಲ್ಲೇಶ್ವರ ಮಠಾಧ್ಯಕ್ಷ ಚನ್ನಬಸವ ಸ್ವಾಮೀಜಿ ದಿವ್ಯ ನೇತೃತ್ವ ವಹಿಸಿದ್ದರು.ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪಿ.ಮರಿಸ್ವಾಮಿ  ಅಧ್ಯಕ್ಷತೆ ವಹಿಸಿದ್ದರು.
ಮೆರವಣಿಗೆಯಲ್ಲಿ ಮಾಜಿ ಶಾಸಕರಾದ ಪರಿಮಳನಾಗಪ್ಪ,ಕೆ.ಆರ್.ಮಲ್ಲಿಕಾರ್ಜುನಪ್ಪ,  ಸಿ.ಎಸ್.ನಿರಂಜನ್ ಕುಮಾರ್, ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಶ್ರೀರೂಪ, ಜಿ.ಪಂ.ಸಿಇಒ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು, ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಜಿಲ್ಲೆಯ ಮಠಾಧೀಶರುಗಳು, ಬಸವ ಭಕ್ತರು, ಬಸವ ತತ್ವ ಅನುಯಾಯಿಗಳು, ಸಮಾಜದ ಬಂಧುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *