ಪ್ರಚೋದನಾಕಾರಿ ಹೇಳಿಕೆ ಪೋಸ್ಟ್ ಮಾಡುವವರ ವಿರುದ್ದ ಕಾನೂನು ಕ್ರಮ- ಎಸ್ಪಿ ಎಂ.ಮುತ್ತುರಾಜು ಎಚ್ಚರಿಕೆ

  • ಹೊಳೆಮುರಿದಟ್ಟಿ,ಕರಡಿಗುಡ್ಡ ಪ್ರಕರಣ

ಚಾಮರಾಜನಗರ: ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಳೆಮುರಿದಟ್ಟಿ ಮತ್ತು ಕರಡಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ,ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಮುತ್ತುರಾಜು ಅವರು ಎಚ್ಚರಿಕೆ ನೀಡಿದ್ದಾರೆ.

ಹೊಳೆಮುರಿದಟ್ಟಿ ಮತ್ತು ಕರಡಿಗುಡ್ಡ ಘಟನೆಗೆ ಸಂಬಂಧ ಈಗಾಗಲೇ ಪ್ರಕರಣಗಳನ್ನು ದಾಖಲಿಸಿಕೊಂಡು ಸರ್ಕಾರದ ಆದೇಶದಂತೆ ಉನ್ನತ ಮಟ್ಟದ ತನಿಖೆ ಕೈಗೊಳ್ಳಲಾಗಿದೆ. ಈ ವಿಚಾರವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪರ ಮತ್ತು ವಿರೋಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದು ಸುಳ್ಳು ಸುದ್ದಿಗಳು, ಆಡಿಯೋ ಸಂದೇಶಗಳು,ಪ್ರಚೋದನಕಾರಿ ಪೋಸ್ಟ್ ಗಳನ್ನು ಮಾಡುತ್ತಿದ್ದಾರೆ. ಇದರಿಂದ ಎರಡು ರಾಜ್ಯಗಳ,ಎರಡು ಬಾಷೆಗಳ ಹಾಗೂ ಎರಡು ಜನಾಂಗಗಳ ನಡುವೆ ದ್ವೇಷ ಭಾವನೆಗಳು ಉಂಟಾಗುವ ಸಂಭವವಿರುವುದರಿಂದ ಜಿಲ್ಲಾ ಪೊಲೀಸ್ ಕಚೇರಿಯ ಮೀಡಿಯಾ ಮಾನಿಟರಿಂಗ್ ಸೆಲ್ ನಲ್ಲಿ ಸತತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿಗಾವಹಿಸಲಾಗಿದೆ.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವರ ಬಗ್ಗೆ ನಿರಂತರವಾಗಿ ನಿಗಾವಣೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುಳ್ಳು ಸುದ್ದಿಗಳು, ಆಡಿಯೋ ಸಂದೇಶಗಳು,ಕೋಮು ಸೌಹಾರ್ದ, ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವಂತಹ ಪದಬಳಕೆ ಹಾಗೂ ಪೋಸ್ಟ್ ಗಳನ್ನು ಹಾಕಿದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆ ಗಳಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಮುತ್ತುರಾಜು ಅವರು ಪ್ರಕಟಣೆಯಲ್ಲಿ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *