ಚಿಕ್ಕಮೋಳೆ ಗ್ರಾಮದಲ್ಲಿ ಚಿರತೆ ದಾಳಿ: ಎರಡು ಕರುಗಳು ಬಲಿ

ಚಾಮರಾಜನಗರ: ತಾಲೂಕಿನ ಚಿಕ್ಕಮೋಳೆ ಗ್ರಾಮದ ಕೃಷ್ಣಶೆಟ್ಟಿ ಎಂಬುವವರ ಜಮೀನಿನಲ್ಲಿ ಚಿರತೆ ದಾಳಿ ನಡೆಸಿ ಎರಡು ಕರುಗಳನ್ನು ಕೊಂದು ಹಾಕಿದೆ.

ಕೃಷ್ಣಶೆಟ್ಟಿ ಅವರ ಜಮೀನಿನಲ್ಲಿ ಇದ್ದ ಎರಡು ಕರುಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದ್ದು, ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗಿದೆ.

ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚುತ್ತಿರುವುದರಿಂದ ರೈತರು ಹಾಗೂ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಯನ್ನು ಸೆರೆಹಿಡಿಯಲು ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *