ಕೆಲ್ಲಂಬಳ್ಳಿ ಗ್ರಾಮದಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ; ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ತಾಲೂಕಿನ ಕೆಲ್ಲಂಬಳ್ಳಿ ಗ್ರಾಮದಲ್ಲಿ ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಮೂಡಿದೆ.
ಚಿರತೆ ಓಡಾಟದಿಂದ ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯಪಡುವಂತಾಗಿದೆ. ಜಮೀನುಗಳಿಗೆ ತೆರಳಲು ಸಾಧ್ಯವಾಗದೆ ರೈತರು ಆತಂಕದಲ್ಲಿದ್ದಾರೆ.

ಚಿರತೆ ಓಡಾಟದ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು, ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸುವಂತೆ ಮನವಿ ಮಾಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕೂಡಲೇ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *