ಕೆ.ಕೆ.ಹುಂಡಿಯಲ್ಲಿ ಅನಾರೋಗ್ಯದಿಂದ ಜಾನುವಾರು ಸಾವು: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ : ತಾಲೂಕಿನ ಕೆ.ಕೆ.ಹುಂಡಿ ಗ್ರಾಮದ ತೋಟದ ಮನೆಯಲ್ಲಿ ಪಳನಿಸ್ವಾಮಿ ಎಂಬುವರಿಗೆ ಸೇರಿದ ಹಸುವೊಂದು ಅನಾರೋಗ್ಯದ ಕಾರಣ ಮೃತಪಟ್ಟ ಹಿನ್ನೆಲೆಯಲ್ಲಿ ಪಶುಸಂಗೋಪನೆ ರೇಷ್ಮೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವರದಿ ಬಂದ ಬಳಿಕ ಪಶುಸಂಗೋಪನೆ ಇಲಾಖೆಯಿಂದ ನಿಯಮಾನುಸಾರ ದೊರೆಯುವ ಪರಿಹಾರವನ್ನು ವಿತರಿಸಲಾಗುವುದು ಎಂದು ಹಸುವಿನ ಮಾಲೀಕರಿಗೆ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕೆ.ಕೆ.ಹುಂಡಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಮಹದೇವಸ್ವಾಮಿ, ವೀರನಪುರದ ಮುಖಂಡರು ಹಾಗೂ ಇತರರು ಇದ್ದರು.

Leave a Reply

Your email address will not be published. Required fields are marked *