ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು 4 ನಾಮಪತ್ರಗಳು ಸಲ್ಲಿಕೆಯಾಗಿವೆ.

22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದಿಂದ 2024ರ ಸಾರ್ವತ್ರಿಕ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ಗುರುಲಿಂಗಯ್ಯ, ರಾಜು. ಕೆ, ಎಂ. ನಾಗೇಂದ್ರಬಾಬು ಹಾಗೂ ಎನ್. ಅಂಬರೀಷ್ ಎಂಬುವವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಒಟ್ಟಾರೆ ಇದುವರೆಗೆ ಎಂಟು ಅಭ್ಯರ್ಥಿಗಳಿಂದ ಒಂಭತ್ತು ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ https://affidavit.eci.gov.in ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಲಾಗಿದೆ ಮತ್ತು ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡವಿಟ್ ಅನ್ನು ಪ್ರಚುರ ಪಡಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಗೀತಾ ಹುಡೇದ ಅವರು ಉಪಸ್ಥಿತರಿದ್ದರು.