ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ 2569ನೇ ಬುದ್ದ ಪೂರ್ಣಿಮೆ ಭಗವಾನ್ ಬುದ್ದ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 12ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30 ಗಂಟೆಗೆ ನಗರದ ಸಾರನಾಥ ಬೌದ್ದವಿಹಾರದ ಬಳಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಟಿ. ನರಸೀಪುರದ ಲುಂಬಿಣಿ ಬೌದ್ದವಿಹಾರದ ಭಂತೆ ಸಮಣಪಾಲ ಅವರು ದಿವ್ಯಸಾನಿಧ್ಯ ವಹಿಸುವರು. ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಘನ ಉಪಸ್ಥಿತಿ ವಹಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಮರಿಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ, ನಗರಸಭೆ ಉಪಾಧ್ಯಕ್ಷರಾದ ಮಮತ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಗರದ ಸಾಹಿತಿ ಡಾ. ಬಿ.ಆರ್. ಕೃಷ್ಣಕುಮಾರ್ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
Like this:
Like Loading...
Related