ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಬೆಳಗ್ಗೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ವಿಜೃಂಭಣೆಯಿಂದ ನೆರವೇರಿತು.

ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇಗುಲದಲ್ಲಿ ಎಂದಿನಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮಹಾಶಿವರಾತ್ರಿ ಜಾತ್ರಾ ರಥೋತ್ಸವದ ಪ್ರಯುಕ್ತ ಮಲೆ ಮಾದಪ್ಪನಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದ ಬಳಿಕ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಒಳಭಾಗದಲ್ಲಿ ಬೇಡಗಂಪಣ ಸಮುದಾಯದ ವಿಧಿ ವಿಧಾನಗಳಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ನಂತರ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವವನ್ನು ಸಾರ್ವಜನಿಕರು ಭಕ್ತಿಯಿಂದ ಜೈಕಾರ ಘೋಷಣೆಗಳನ್ನುಕೂಗುತ್ತಾ ರಥೋತ್ಸವನ್ನು ಕಾರ್ಯಕ್ರಮ ನೆರವೇರಿಸಿದರು.
ಸಾವಿರಾರು ಭಕ್ತಾಧಿಗಳು ರಥೋತ್ಸವವನ್ನು ಎಳೆದು, ಹಣ್ಣು ಜವನ ಎಸೆದು ಭಕ್ತಿಯನ್ನು ಸಮರ್ಪಿಸಿದರು.