- ಸಂಗೀತ ನೃತ್ಯ ಅಕಾಡೆಮಿ ಸದಸ್ಯ ಸಂಚಾಲಕರಾದ ಡಿ. ದೇವರಾಜು
ಚಾಮರಾಜನಗರ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿRXಯಿಂದ ಜುಲೈ 16 ಹಾಗೂ 17ರಂದು ನಗರದಲ್ಲಿ ಮಾಧುರ್ಯ-2026 ಶೀರ್ಷಿಕೆಯಡಿ ನೃತ್ಯ, ಗಾಯನ, ಗಮಕ ಹಾಗೂ ಕಥಾಕೀರ್ತನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿಯ ಸದಸ್ಯ ಸಂಚಾಲಕರಾದ ಡಿ. ದೇವರಾಜು (ಪದ ದೇವರಾಜು) ಅವರು ತಿಳಿಸಿದರು.
ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಸಂಗೀತ ನೃತ್ಯ ಅಕಾಡೆÀಮಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ 2 ದಿನಗಳ ಕಾಲ ಸ್ಥಳೀಯ ಕಲಾವಿದರಿಂದ ಭರತನಾಟ್ಯ ಸೇರಿದಂತೆ ಇತರೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಇತ್ತೀಚೆಗೆ ಮೊಬೈಲ್ ಹಾವಳಿಯಿಂದ ನಶಿಸುತ್ತಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಿ ಇಂದಿನ ಯುವಜನತೆಗೆ ಜಾನಪದ ಕಲೆಗಳ ಮಹತ್ವ ಕುರಿತು ಅರಿವು ಮೂಡಿಸಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ರಾಜ್ಯ ಗಡಿಭಾಗಗಳಲ್ಲಿ ಸಂಗೀತ, ನೃತ್ಯ, ಗಾಯನ, ಗಮಕ ಹಾಗೂ ಕಥಾಕೀರ್ತನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದೆ. ರಾಜ್ಯದ ಗಡಿಜಿಲ್ಲೆಗಳಾದ ಬೀದರ್, ವಿಜಯಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹೇಳಿದರು.
ಪ್ರಸ್ತುತ ಗಡಿಜಿಲ್ಲೆಯಾಗಿರುವ ಜಾನಪದ ಕಲೆಗಳ ತವರೂರು ಚಾಮರಾಜನಗರದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕಾರ್ಯಕ್ರಮ ನಡೆಯಲಿದ್ದು, ಸಾಂಸ್ಕøತಿಕ ಕಲಾಪ್ರಕಾರಗಳ ರಸದೌತಣ ಉಣಬಡಿಸಲಿದೆ. ಹಿಂದೆ ಹಳ್ಳಿಹಳ್ಳಿಗಳಲ್ಲಿ ಹೆಚ್ಚು ಜನಪ್ರಿಯವಾಗಿ ಇಂದಿನ ತಾಂತ್ರಿಕ ಯುಗದಲ್ಲಿ ತನ್ನ ಪ್ರಭಾವ ಕಳೆದುಕೊಂಡಿರುವ ಹರಿಕಥೆಯ ಪ್ರಸ್ತುತತೆಯನ್ನು ಯುವಜನರಿಗೆ ತಿಳಿಸಿಕೊಡುವ ಅವಶ್ಯವಿದೆ. ಯುವಕ, ಯುವತಿಯರನ್ನು ಮತ್ತೆ ಕಲಾಪ್ರಕಾರಗಳತ್ತ ಸೆಳೆಯಬೇಕಾಗಿದೆ ಎಂದರು.
ಜುಲೈ 16ರಂದು ಸಂಜೆ 4 ಗಂಟೆಗೆ ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಭರತನಾಟ್ಯ ಹಾಗೂ ಕಥಾಕೀರ್ತನ ಕಾರ್ಯಕ್ರಮಗಳು ನಡೆಯಲಿದೆ. ಜುಲೈ 17ರಂದು ಸಂಜೆ 4 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಗಮಕ ವಾಚನ ಮತ್ತು ಭಕ್ತಿ ಭಾವ ಗಾಯನ ಹಾಗೂ ಕಥಾಕೀರ್ತನ ಕಾರ್ಯಕ್ರಮ ನಡೆಯಲಿವೆ ಎಂದು ಅಕಾಡೆಮಿಯ ಸದಸ್ಯ ಸಂಚಾಲಕರಾದ ಡಿ. ದೇವರಾಜು (ಪದ ದೇವರಾಜು) ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಎಸ್. ರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎ. ರಮೇಶ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.