ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಶ್ರೀಕೆಂಪನಂಜಾಂಬಾ ಅಮ್ಮನವರ ಸಮೇತ ಜುಲೈ 28ರಂದು ನಡೆಯಲಿರುವ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವದ ಅಂಗವಾಗಿ ಜುಲೈ 21 ರಿಂದ ಆಗಸ್ಟ್ 1 ರವರೆಗೆ ವಿವಿಧ ಪೂಜಾ ಕೈಂಕಾರ್ಯಗಳು ನಡೆಯಲಿವೆ.
ಜುಲೈ 21ರಂದು ಅಂಕುರಾರ್ಪಣ ಪೂರ್ವಕ ವೃಷಭಾಧಿವಾಸ, ಜುಲೈ 22ರಂದು ಹಗಲು 12ಕ್ಕೆ ಅಭಿಜಿನ್ ಮುಹೂರ್ತದಲ್ಲಿ ಧ್ವಜಾರೋಹಣ ಪೂರ್ವಕ ಭೇರಿ ತಾಡನಾ ನಂತರ ಶಿಭಿಕಾರೋಹಣೋತ್ಸವ, 23ರಂದು ಚಂದ್ರಮಂಡಲಾರೋಹಣೋತ್ಸವ, 24ರಂದು ಅನಂತ ಪೀಠಾರೋಹಣೋತ್ಸವ, 25ರಂದು ಪುಷ್ಪಮಂಟಪಾರೋಹಣೋತ್ಸವ, 26ರಂದು ವೃಷಭಾರೋಹಣೋತ್ಸವ, 27 ರಂದು ವಸಂತೋತ್ಸವ ಪೂರ್ವಕ ಗಜವಾಹನೋತ್ಸವ ನಡೆಯಲಿದೆ.
ಜುಲೈ 28ರಂದು ಪೂರ್ವಾಷಾಢ ನಕ್ಷತ್ರದಲ್ಲಿ ಬೆಳಿಗ್ಗೆ 11 ರಿಂದ 11.37 ಗಂಟೆಯೊಳಗೆ ‘ಶ್ರೀಮನ್ಮಹಾರಥಾರೋಹಣ’ ಆನಂತರ ಹಂಸಾರೋಹಣಣಾನಂತರ ನಟೇಶೋತ್ಸವ ಜರುಗಲಿದೆ. 29ರಂದು ಮೃಗಯಾತ್ರಾ ಪೂರ್ವಕ ಅಶ್ವಾರೋಹಣ ನಂತರ ಮಹಾಭೂತಾರೋಹಣ, ದೇವಿ ಪ್ರಣಯ ಕಲಹ ಸಂಧಾನೋತ್ಸವ, 30 ರಂದು ಹಗಲುಚೂರ್ಣೋತ್ಸವ ಪೂರ್ವಕ ಅವಭೃತ ತೀರ್ಥಸ್ನಾನ, ಧ್ವಜಾವರೋಹಣ, ಮೌನಬಲಿ, 31ರಂದು ಪುಷ್ಪಯೋಗ ಪೂರ್ವಕ ಕೈಲಾಸಯಾನಾರೋಹಣೋತ್ಸವ, ಆಗಸ್ಟ್ 1ರಂದು ಮಹಾಸಂಪೆÇ್ರೀಕ್ಷಣಾ ಪೂರ್ವಕ ನಂದಿವಾಹನೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.