ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ

ಬೆಳಗಾವಿ: ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು, ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *