ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ: ಅಬ್ದುಲ್ ಅಜೀಜ್ ದೀನಾ

  • ರೋಟರಿ ಸಂಸ್ಥೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
  • 260 ಮಂದಿ ತಪಾಸಣೆ,  110 ಮಂದಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
ನಡೆಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ  ರೋಟರಿ ಸಂಸ್ಥೆ,
ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ  260
ಮಂದಿ ತಪಾಸಣೆ ಮಾಡಿಸಿಕೊಂಡರು. 110ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ  ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.

ರೋಟರಿ ಅಧ್ಯಕ್ಷ  ಅಬ್ದುಲ್ ಅಜೀಜ್ ದೀನಾ, ರೋಟರಿ ಸಂಸ್ಥೆಯು ಕಣ್ಣಿನ ಆರೋಗ್ಯದ ಕಡೆ ಗಮನಹರಿಸುವುದು ಇಂದಿನ ಡಿಜಿಟಲ್ ಯುಗದಲ್ಲಿ ಅತ್ಯಗತ್ಯವಾಗಿದೆ. ಈ ಶಿಬಿರಕ್ಕೆ ಹೊರ ಜಿಲ್ಲೆಗಳಿಂದ ಜನತೆ ಬರುತ್ತಿದ್ದು,  ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು,  ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ  ಶಿಬಿರದ ಪ್ರಯೋಜನ ಪಡೆಯುತ್ತಿರುವುದು ತುಂಬಾ ಸಂತಸವಾಗಿದ್ದು,ಮುಂದಿನ ಶಿಬಿರದ  ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ   ಕಾರ್ಯದರ್ಶಿ ಜಿ.ಅಂಕಶೆಟ್ಟಿ, ರೋಟರಿ ಸಂಸ್ಥಾಪಕ ಸದಸ್ಯ ಜಿ.ಆರ್.ಅಶ್ವಥ್ ನಾರಾಯಣ್, ಜಿಲ್ಲಾ ಸಹಾಯಕ ಗೌರ್ನರ್ ಸುರೇಶ್, ನಿರ್ಗಮಿತ ಅಧ್ಯಕ್ಷ ಕಾಗಲವಾಡಿ ಚಂದ್ರು, ಸಿ.ಎನ್.ಚಂದ್ರಪ್ರಭಜೈನ್, ಪ್ರಕಾಶ್, ಎಸ್ ಅರ್ ಎಸ್ ಶ್ರೀನಿವಾಸ, ಎ.ಶ್ರೀನಿವಾಸನ್, ಖಜಾಂಚಿ ಆರ್.ಎಂ.ಸ್ವಾಮಿ, ಬಿ.ಕೆ.ಮೋಹನ್, ಮಹಾದೇವಸ್ವಾಮಿ, ಪಿ ಆರ್ ಓ ವಿಜಯಕಾಂತ್, ಮನೋಜ್, ಸವಿತಾ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *