ಕಣ್ಣಿನ ಆರೋಗ್ಯಕಾಪಾಡಿಕೊಳ್ಳಿ:  ಸಿ.ವಿ.ಶ್ರೀನಿವಾಸಶೆಟ್ಟಿ

ರೋಟರಿ ಸಂಸ್ಥೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ, 316 ತಪಾಸಣೆ, 72 ಮಂದಿ ಶಸ್ತ್ರ ಚಿಕಿತ್ಸೆಗೆ ಆಯ್ಕೆ

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ  ರೋಟರಿ ಸಂಸ್ಥೆ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆದು 316 ಮಂದಿ ತಪಾಸಣೆ ಮಾಡಿಸಿಕೊಂಡರು.72 ಮಂದಿ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

ರೋಟರಿ ಸಂಸ್ಥಾಪಕ ಸದಸ್ಯ ಸಿ.ವಿ.ಶ್ರೀನಿವಾಸಶೆಟ್ಟಿ ಮಾತನಾಡಿ, ಕಣ್ಣುಗಳು ನಮ್ಮ ದೇಹದ ಅತ್ಯಂತ ಸೂಕ್ಷ್ಮ ಮತ್ತು ಪ್ರಮುಖ ಅಂಗಗಳಾಗಿದ್ದು. ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್, ಮೊಬೈಲ್ ಬಳಕೆಯಿಂದಾಗಿ ಕಣ್ಣುಗಳ ಮೇಲಿನ ಒತ್ತಡ ಹೆಚ್ಚಾಗಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು.

ರೋಟರಿ ಅಧ್ಯಕ್ಷ  ಅಬ್ದುಲ್ ಅಜೀಜ್ ದೀನಾ ಮಾತನಾಡಿ,  ಪ್ರತಿ ತಿಂಗಳ ಮೊದಲನೆಯ ಭಾನುವಾರ ರೋಟರಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಹೊರ ಜಿಲ್ಲೆಗಳಿಂದ ಜನತೆ ಬರುತ್ತಿದ್ದು,  ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿರುವುದು ತುಂಬಾ ಸಂತಸವಾಗಿದ್ದು,ಮುಂದಿನ ಶಿಬಿರದ  ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ಕಾರ್ಯದರ್ಶಿ ಜಿ.ಅಂಕಶೆಟ್ಟಿ, ಮಾಜಿ ಅಧ್ಯಕ್ಷರಾದ ಅಧ್ಯಕ್ಷ ಕಾಗಲವಾಡಿ ಚಂದ್ರು, ಎಲ್.ನಾಗರಾಜು, ಯೋಗರಾಜು, ಸಿ.ಎ.ನಾರಾಯಣ್, ಚಂದ್ರಪ್ರಭಜೈನ್, ಬಿ.ಕೆ.ಮೋಹನ್, ಡಿ.ನಾಗರಾಜ, ಎ.ಶ್ರೀನಿವಾಸನ್, ಎಸ್ ಆರ್ ಎಸ್ ಶ್ರೀನಿವಾಸ, ಹರೀಶ್, ಸದಸ್ಯರಾದ ಮೇರಿ ಅಲಿಸ್, ಪುಳಿಯೋಗರೆ ಮಹಾದೇವಸ್ವಾಮಿ, ಶ್ರೀನಿಧಿಕುದರ್, ಪಿ ಆರ್ ಓ ವಿಜಯಕಾಂತ್, ಮನೋಜ್, ಸವಿತಾ ಇತರರು ಹಾಜರಿದ್ದರು

Leave a Reply

Your email address will not be published. Required fields are marked *