ಆರೋಗ್ಯ ಶಿಬಿರ ಸದುಪಯೋಗಪಡಿಸಿಕೊಳ್ಳಿ: ಕೆ.ಪಿ.ಸದಾಶಿವಮೂರ್ತಿ

  • ಕಾಗಲವಾಡಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ, 240 ಮಂದಿ ತಪಾಸಣೆ, ಅಗತ್ಯಯುಳ್ಳವರಿಗೆ ಔಷಧಿ ವಿತರಣೆ

ಚಾಮರಾಜನಗರ: ತಾಲೂಕಿನ ಕಾಗಲವಾಡಿ ಗ್ರಾಮದಲ್ಲಿ  ಉಚಿತ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. 240 ಮಂದಿ ತಪಾಸಣೆ ಮಾಡಿಸಿಕೊಂಡರು. ಅಗತ್ಯ ಯುಳ್ಳವರಿಗೆ ಔಷಧಿ ವಿತರಿಸಲಾಯಿತು.
ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದ ಜಿ.ಪಂ.ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ ಮಾತನಾಡಿ, ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿದ್ದು. ಬಡವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು, ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ತಾಲೂಕಿನ ಕಾಗಲವಾಡಿಯಲ್ಲಿ ವಿಭಾ ಕನ್ವೆನ್ಷನ್ ಹಾಲ್ಕಾ ಗಲವಾಡಿ ಹಾಲು ಉತ್ಪಾದಕರ ಸಹಕಾರ ಸಂಘ, ರೋಟರಿ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೆಲ್ಪ್ಏಚ್ ಇಂಡಿಯಾ, ಚೇತನ್ಯ ನಟ್ ವರ್ಕ್, ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ, ನಾರಾಯಣ ಆಸ್ಪತ್ರೆ, ಮೈಸೂರು, ಇವರ ಸಹಯೋಗದೊಂದಿಗೆ ನಡೆದ ಉಚಿತ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ರೋಟರಿ ಸಂಸ್ಥೆ ಅಧ್ಯಕ್ಷರು, ಡೇರಿ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ,  ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಆಗಾಗಿ ಕಾಗಲವಾಡಿ ಭಾಗದ ಜನರಿಗೆ  ಅನುಕೂಲವಾಗಿ ಎಂದು ಉಚಿತ ಬೃಹತ್ ಆರೋಗ್ಯ ಶಿಬಿರ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.
ಡಾ.ಜನಾರ್ದನ್ ಮಾತನಾಡಿ, ನಮ್ಮ ಜೀವನಶೈಲಿ ಬದಲಿಸಿಕೊಳ್ಳುವ ಮೂಲಕ ಒತ್ತಡದಿಂದ ಮುಕ್ತರಾಗಲು ದೈಹಿಕ ವ್ಯಾಯಾಮ, ಯೋಗಾಭ್ಯಾಸ, ಧ್ಯಾನ ಮಾಡಬೇಕು. ದೈಹಿಕ ಚಟುವಟಿಕೆಯಿಂದ ಹೃದಯ ಸಂಬಂಧಿ ಕಾಯಿಲೆ ಕಡಿಮೆ ಮಾಡಬಹುದು. ರೋಗ ಬರುವ ಮುನ್ನ ಮುಂಜಾಗ್ರತೆ ವಹಿಸಬೇಕು ಎಂದರು.
ಪಿಆರ್ ಓ ವಿಜಯಕುಮಾರ್, ಸಂಘದ ನಿರ್ದೇಶಕ ರಾದ ಮಹೇಶ್, ಶಿವಸ್ವಾಮಿ, ಲಿಂಗರಾಜು, ಕೂಸಪ್ಪ, ಜಗದೀಶ್, ದಕ್ಷಿಣಮೂರ್ತಿ,ಜಗದೀಶ್, ಶೋಭ, ನಾಗರಾಜು, ಶಿವಸ್ವಾಮಿ, ನಂಜಶೆಟ್ಟಿ, ಕಾರ್ಯದರ್ಶಿ ಮಹಾದೇವಸ್ವಾಮಿ , ಸುರೇಶ್,   ಮುಖಂಡರಾದ ನಾಗೇಂದ್ರ, ಜಯಶಂಕರಮೂರ್ತಿ, ಮರಿಸ್ವಾಮಿ, ಗುಂಡಣ್ಣ, ಮಹೇಶ್ ಹಾಜರಿದ್ದರು.

Leave a Reply

Your email address will not be published. Required fields are marked *