
ಚಾಮರಾಜನಗರ: ಮಹಾಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಫೆಬ್ರವರಿ 25 ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 1ರ ಸಂಜೆ 7 ಗಂಟೆಯವರೆಗೆ ರವರೆಗೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು (ಗೂಡ್ಸ್,ಆಟೊ ರಿಕ್ಷಾಗಳು ಸೇರಿದಂತೆ) ತೆರಳುವುದನ್ನು ತಾತ್ಕಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಶಿವರಾತ್ರಿ ಜಾತ್ರೆ ಹಿನ್ನಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಜಿಲ್ಲೆ,ಹೊರ ಜಿಲ್ಲೆ,ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ವಾಹನ ದಟ್ಟಣೆ ಹೆಚ್ಚಾಗಲಿದೆ.ಸದರಿ ರಸ್ತೆಯು ಅರಣ್ಮ ಪ್ರದೇಶ ಹಾಗೂ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ಸಂಚಾರದಲ್ಲಿ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವ ಕಾರಣ ದ್ವಿಚಕ್ರ ವಾಹನ,ತ್ರಿಚಕ್ರ ವಾಹನ(ಆಟೋ ರಿಕ್ಷಾ,ಗೂಡ್ಸ್ ವಾಹನಗಳು ಸೇರಿದಂತೆ) ಗಳು ಜಾತ್ರೆಗಾಗಿ ಮಲೆ ಮಹದೇಶ್ವರ ಬೆಟ್ಟ ತೆರಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.