ಚಾಮರಾಜನಗರ: ಪ್ರಸಿದ್ದ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಲಯ, ದಸರಾ, ದೀಪಾವಳಿ ಹಾಗೂ ಕಾರ್ತಿಕ ಸೋಮವಾರ ಜಾತ್ರಾ ಮಹೋತ್ಸವದಲ್ಲಿ ಭಕ್ತಾಧಿಗಳಿಗೆ ಸಕಲ ಸೌಲಭ್ಯ ಕಲ್ಪಿಸಲು ಎಲ್ಲ ಸಿದ್ದತೆ ಕೈಗೊಳ್ಳುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ವಿಕಾಸಸೌಧದ ಮೂರನೇ ಮಹಡಿಯ ಸಭಾಂಗಣದಲ್ಲಿಂದು ಮಲೆಮಹದೇಶ್ವರ ಬೆಟ್ಟದ ಮಹಾಲಯ, ದಸರಾ, ದೀಪಾವಳಿ ಹಾಗೂ ಕಾರ್ತಿಕ ಸೋಮವಾರ ಜಾತ್ರಾ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ದತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ಜಾತ್ರೆಗಾಗಿ ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿದ್ದಾರೆ. ಹೀಗಾಗಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಇರಬೇಕು. ಶುದ್ದ ಕುಡಿಯುವ ನೀರು ಪೂರೈಸಬೇಕು, ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳಲ್ಲಿಯೂ ನೀರಿನ ವ್ಯವಸ್ಥೆ ಇರಬೇಕು. ಭಕ್ತಾಧಿಗಳಿಗೆ ನೆರಳಿನ ವ್ಯವಸ್ಥೆಗಾಗಿ ಶಾಮಿಯಾನ ಅಳವಡಿಸಬೇಕು. ಸರತಿ ಸಾಲಿನಲ್ಲಿ ದರ್ಶನಕ್ಕಾಗಿ ಬರುವ ಭಕ್ತರಿಗೂ ದೇವಸ್ಥಾನದ ಸುತ್ತಲೂ ಶಾಮಿಯಾನ ಅಳವಡಿಸಿ ನೆರಳಿನ ವ್ಯವಸ್ಥೆಯನ್ನ ಮಾಡಬೇಕು ಎಂದರು.
ವಿಶೇಷ ದಾಸೋಹದಲ್ಲಿ ಭಕ್ತರಿಗೆ ಅನುಕೂಲವಾಗುವ ಸೌಕರ್ಯಗಳನ್ನು ಕಲ್ಪಿಸಬೇಕು. ಭಕ್ತಾಧಿಗಳು ಹೆಚ್ಚು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವುದರಿಂದ ಅಗತ್ಯಕ್ಕೆ ತಕ್ಕಂತೆ ಶೌಚಾಲಯಗಳು, ಸ್ನಾನಗೃಹಗಳು ಇರಬೇಕು. ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಶುಚಿತ್ವ ಕಾಪಾಡಿಕೊಳ್ಳಲು ಕ್ರಮವಹಿಸಬೇಕು. ವಿಶೇಷ ಲಗೇಜ್ ಕೌಂಟರ್, ಮಾಹಿತಿ ಕೇಂದ್ರ, ನಿರ್ವಹಣೆ ಮಾಡಬೇಕು ಎಂದರು.
ಜಾತ್ರೆ ಸಂದರ್ಭಗಳಲ್ಲಿ ನಿರಂತರವಾಗಿ ದಾಸೋಹ ಪ್ರಸಾದ ವಿತರಣೆ ಇರಬೇಕು. ಪರು (ಅಡುಗೆ) ಮಾಡುವ ಭಕ್ತಾಧಿಗಳಿಗೆ ಬೇಕಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ಭಕ್ತಾಧಿಗಳ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇರಬೇಕು. ಸುಗಮ ಸಂಚಾರಕ್ಕಾಗಿ ಸೂಚನಾ ಫಲಕಗಳು, ಬ್ಯಾರಿಕೇಡ್ ವ್ಯವಸ್ಥೆಯನ್ನು ಮಾಡಬೇಕು ಎಂದು ಸಚಿವರು ತಿಳಿಸಿದರು.
ಜಾತ್ರಾ ಸಂದರ್ಭದಲ್ಲಿ ಎಲ್ಲಾ ಕಡೆಯಿಂದ ಆಗಮಿಸುವ ಭಕ್ತಾಧಿಗಳಿಗೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ಅಗತ್ಯಕ್ಕೆ ತಕ್ಕಂತೆ ಬಸ್ಸುಗಳನ್ನು ನಿಯೋಜನೆ ಮಾಡಬೇಕು. ಜಾತ್ರಾ ಅವಧಿಯಲ್ಲಿ ಅಗ್ನಿಶಾಮಕ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಅಗತ್ಯ ಸೇವೆಯನ್ನು ನೀಡಬೇಕು. ಜಾತ್ರಾ ಸಂದರ್ಭದಲ್ಲಿ ಸ್ವಚ್ಚತೆ, ಆರೋಗ್ಯ ಸೇವೆಗಾಗಿ ವಿಶೇಷವಾಗಿ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದ ರಸ್ತೆಯ ಮಾರ್ಗ ಮಧ್ಯದಲ್ಲಿ ರಸ್ತೆಗಳನ್ನು ತುರ್ತಾಗಿ ದುರಸ್ಥಿ ಮಾಡಬೇಕಿದೆ ಈ ಕೆಲಸವನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ತಿಳಿಸಿದರು.
ಜಾತ್ರಾ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಸಿದ್ದತೆಗಳ ಬಗ್ಗೆ ಸಾಲೂರು ಶ್ರೀಗಳಾದ ಶಾಂತಮಲ್ಲಿಕಾರ್ಜುನಸ್ವಾಮಿ ಅವರು ಸಲಹೆ ಸೂಚನೆಗಳನ್ನು ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಕನ್ನಡ ಮತ್ತು ಸಂಸ್ಜೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಹಿಂದು ಧಾರ್ಮಿಕ ಸಂಸ್ಥೆಗಳು, ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಂ.ವಿ. ವೆಂಕಟೇಶ್ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯನಾರಾಯಣ, ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಇಬ್ರಾಹಿಂ ಮೈಗೂರು, ಚಾಮರಾಜನಗರ ವಿಭಾಗೀಯ ನಿಯಂತ್ರಾಣಾಧಿಕಾರಿ ಅಶೋಕ್ ಕುಮಾರ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಕೇಶವಪ್ರಸಾದ್, ಚಾಮರಾಜನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯತ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಎಂ.ವಿ. ಸುಧಾ, ತಹಶೀಲ್ದಾರ್ ಚೈತ್ರ, ತಾಲೂಕು ಪಂಚಾಯತ್ ಕಾಯರ್ನಿರ್ವಾಹಕ ಅಧಿಕಾರಿ ಉಮೇಶ್, ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್,ಪ್ರಾಧಿಕಾರದ ಸದಸ್ಯರಾದ ಭಾಗ್ಯಮ್ಮ, ಗಂಗನ ತಿಮ್ಮಯ್ಯ, ಪಿ. ಮಹದೇವಪ್ಪ, ಮರಿಸ್ವಾಮಿ, ವಿಜಯ ಕುಮಾರ, ಅರ್ಚಕರಾದ ನಾಗಪ್ಪ, ಚೇಳ ಮಾದಪ್ಪ ತಂಬಡಿ, ಕುಮಾರ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related