ಆ.20ರಂದು ವಿವಿಧ ಬೇಡಿಕೆ ಈಡೇರಿಕೆಗಾಗಿ ಬೃಹತ್ ಶಾಂತಿಯುತ ಮೆರವಣಿಗೆ

ಚಾಮರಾಜನಗರ: ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‍ಗೆ 5 ರೂ.ನಿಂದ 10 ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಹಾಗೂ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಉತ್ಪಾದಕರು ಮತ್ತು ನೌಕರರ ವತಿಯಿಂದ ಆ.20ರಂದು ನಗರದಲ್ಲಿ ಬೃಹತ್ ಶಾಂತಿಯುತ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.20ರ ಗುರುವಾರ ಬೆಳಿಗ್ಗೆ 10.30ಕ್ಕೆ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ಜಿಲ್ಲಾಡಳಿತ ಭವನದವರೆಗೆ ಸಾಗಲಿದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಹಕ್ಕೋತ್ತಾಯಗಳನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹಾಲು ಉತ್ಪಾದಕರಿಗೆ ನೀಡುತ್ತಿರುವ ಸರ್ಕಾರದ ಪೆÇ್ರೀತ್ಸಾಹಧನವನ್ನು ಪ್ರತಿ ಲೀಟರ್‍ಗೆ 5ರೂ.ನಿಂದ 10 ರೂ.ಗೆ ಹೆಚ್ಚಿಸಬೇಕು. ಬರಗಾಲದ ಹಿನ್ನೆಲೆಯಲ್ಲಿ ರಾಸುಗಳಿಗೆ ಉಚಿತ ಮೇವು ಹಾಗೂ ಪಶು ಆಹಾರಕ್ಕೆ ಸರ್ಕಾರದ ವತಿಯಿಂದ ರಿಯಾಯಿತಿ ನೀಡಬೇಕು.
ಚಾಮುಲ್‍ಗೆ ಸರ್ಕಾರದಿಂದ ಬರಬೇಕಿರುವ 53 ಕೋಟಿ ರೂ. ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರಿಗೆ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 1 ಪೆÇ್ರೀತ್ಸಾಹಧನವನ್ನು ಸರ್ಕಾರದಿಂದ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ ಎಂದರು.
ಸ್ವಂತ ಕಟ್ಟಡವಿಲ್ಲದ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಖಾಲಿ ನಿವೇಶನ ಒದಗಿಸಬೇಕು. ಜಿಲ್ಲೆಯ ಪಶುವೈದ್ಯಕೀಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ಪಶುವೈದ್ಯರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಗಿದೆ. ಹಾಲು ಉತ್ಪಾದಕರ ಉಳಿವಿಗಾಗಿ ಸರ್ಕಾರದ ನೆರವಿಗಾಗಿ ಈ ಹೋರಾಟ ಎಂಬ ಘೋಷಣೆಯೊಂದಿಗೆ ನಡೆಯಲಿರುವ ಮೆರವಣಿಗೆಯಲ್ಲಿ ಹಾಲು ಉತ್ಪಾದಕರು, ಸಹಕಾರ ಸಂಘಗಳ ನೌಕರರು, ರೈತರು ಹಾಗೂ ಆಡಳಿತ ಮಂಡಳಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಚಾಮುಲ್ ನಿರ್ದೇಶಕರಾದ ಶೀಲಾ ಪುಟ್ಟರಂಗಶೆಟ್ಟಿ, ಹೆಚ್.ಸಿ.ಬಸವರಾಜು, ಸದಾಶಿವಮೂರ್ತಿ, ನಾಗೇಂದ್ರ ನಾಮನಿರ್ದೇಶಕರಾದ ರೇವಣ್ಣ ಇದ್ದರು.

Leave a Reply

Your email address will not be published. Required fields are marked *