- ಕಾಂಗ್ರೆಸ್ ದಲಿತ ಸಮುದಾಯಕ್ಕೆ ಮೋಸ ಮಾಡಿಕೊಂಡು ಬಂದಿದೆ: ಡಾ.ವಿ.ಎನ್.ಮಹದೇವಯ್ಯ ಆರೋಪ
ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್. ಸಿ.ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ ಜೂ. 1 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಾಳೆ 11 ಗಂಟೆಗೆ ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಗೆ ಪರಿಶಿಷ್ಟ ಜಾತಿಯ ಸಮುದಾಯದವರು, ಹೆಚ್.ಸಿ.ಮಹದೇವಪ್ಪ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡುವಂತೆ ಮನವಿ ಮಾಡಿದರು.
ಕಾಂಗ್ರೆಸ್.ಪಕ್ಷವನ್ನು ಹೆಚ್ಚಾಗಿ ಬೆಂಬಲಿಸಿಕೊಂಡು ಬಂದಿರುವುದು ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಮೋಸ ಮಾಡಿಕೊಂಡು ಬಂದಿದೆ. ಕಾಂಗ್ರೆನ್ ಬೆಂಬಲಿಸದ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುತ್ತಿದೆ’ ಎಂದು ಆರೋಪಿಸಿದರು.
ಕಾಂಗ್ರೆಸ್ ಬಡವರು, ದಲಿತರು, ಶೋಪಿತರ ಪರವಿದೆ ಎಂದು ನಂಬಿದ್ದೇವು. ಸಂವಿಧಾನವನ್ನು ರಕ್ಷಣೆ ಮಾಡುತ್ತಾರೆ ಎಂದು ಹೇಳಿ ನಮ್ಮ ಸಮುದಾಯ ಕಾಂಗ್ರೆಸ್ ಬೆಂಬಲಿಸಿಕೊಂಡು ಬಂದಿದೆ.
ನಮ್ಮನ್ನು ವೋಟು ಬ್ಯಾಂಕ್ ಮಾಡಿಕೊಂಡಿದೆ. ಅಧಿಕಾರಕ್ಕೆ ಬಂದಂತಹ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಣವಂತರಿಗೆ ಮಣೆ ಹಾಕುವ ಕೆಲಸ ಮಾಡುತ್ತಿದೆ ಇದು ಸರಿಯಲ್ಲ. ನೂತನ ಸಚಿವ ಸಂಪುಟದಲ್ಲಿ ಹೆಚ್.ಸಿ.ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಇಲ್ಲದಿದ್ದರೆ 2028 ರ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಪಿ.ಸಂಘಸೇನ, ಶಂಭುಲಿಂಗಸ್ವಾಮಿ ಮುಳ್ಳೂರು, ರಾಮು ಹೆಗ್ಗಡಹುಂಡಿ, ಉಮ್ಮತ್ತೂರು ಭಾಗ್ಯ, ಹರೀಶ್ ಹೊನ್ನೂರು, ಮರಿಸ್ವಾಮಿ ಚಾಟೀಪುರ ಹಾಜರಿದ್ದರು.