ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ 2 ಡಿಜಿಟಲ್ ಪ್ರಚಾರ ವಾಹನಕ್ಕೆ ಚಾಲನೆ
ದೇಶದ ಮತದಾರರು ಮತ್ತೆ ಮೋದಿ ಪ್ರಧಾನಿ ಮಾಡಲು ಕಾತುರ : ಎನ್.ವಿ. ಫಣೀಶ್
ಚಾಮರಾಜನಗರ: ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ಮಾಡಿರುವ ಯೋಜನೆಗಳು ಪ್ರತಿ ಮನೆಗೂ ತಲುಪಿದೆ. ಈ ಬಗ್ಗೆ ಜಾಗೃತಿ ಮೂಡಿಸಿ, ಬಿಜೆಪಿ ಸಾಧನೆಯನ್ನು ತಿಳಿಸುವ ಕೆಲಸವನ್ನು ನಾವೆಲ್ಲರು ಒಗ್ಗಟ್ಟಿನಿಂದ ಮಾಡೋಣ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಮಾಜಿ ಶಾಸಕ ಸಿ.ಎಸ್. ನಿರಂಜನ್‍ಕುಮಾರ್ ತಿಳಿಸಿದರು.
ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗ ಚಾ.ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 2 ಡಿಜಿಟಲ್ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಳೆದ 2014 ಮತ್ತು 2019ರ ಹತ್ತು ವರ್ಷಗಳ ಅವಧಿಯ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರವನ್ನು ಜನರು ಬಹಳ ಸೂಕ್ಷ್ಮವಾಗಿ ಗಮನಿಸಿದ್ದಾರೆ. ಈ ಹಿಂದಿನ ಹತ್ತು ವರ್ಷಗಳ À ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಾತೀತ, ತೃಷ್ಠೀಕರಣ ರಾಜಕಾರಣ, ಹಗರಣಗಳ ಸರಮಾಲೆಯನ್ನು ನೋಡಿ ಜನರು ಬೇಸತ್ತು ಬಿಜೆಪಿಗೆ 2014ರಲ್ಲಿ ಅಧಿಕಾರ ನೀಡಿದ್ದರು. ಇದನ್ನು ಸಮರ್ಥವಾಗಿ ನಿರ್ವಹಣೆ ಮಾಡಿದ ಮೋದಿ ಅವರು ವಿಶ್ವವೇ ಮೆಚ್ಚುವಂತಹ ಆಡಳಿತ ನೀಡಿದರು. ದೊಡ್ಡ ದೊಡ್ಡ ಯೋಜನೆಗಳನ್ನು ಜಾರಿ ಮಾಡಿದರು ಸಹ ಪ್ರತಿ ಹಳ್ಳಿ ಹಾಗೂ ಕುಗ್ರಾಮದಲ್ಲಿರುವ ಮಹಿಳೆಯರು ಹಾಗೂ ರೈತಾಪಿ ವರ್ಗಗಳಿಗೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇಂಥ ಕೇಂದ್ರ ಸರ್ಕಾರ ಯೋಜನೆಯನ್ನು ಪಡೆದುಕೊಂಡಿರುವ ಕುಟುಂಬಗಳನ್ನು ಗುರುತಿಸಿ ಅವರಿಗೆ ಬಿಜೆಪಿ ಸಾಧನೆ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಜಿಲ್ಲಾ ಪ್ರಭಾರಿ ವಿ. ಫಣೀಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ಮಾಡಿರುವ 300ಕ್ಕು ಹೆಚ್ಚು ಯೋಜನೆಗಳನ್ನು ಜನರಿಗೆ ತಲುಪಿಸಲು ನಾವೆಲ್ಲರು ಮುಂದಾಗೋಣ. ಈಗಾಗಲೇ ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗದೇ, ಜನರು ಭ್ರಮ ನಿರಶನಗೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಜನಪ್ರಿಯ ಯೋಜನೆಗಳು ಯಾವುದೇ ಅಡೆತಡೆಗಳು ಇಲ್ಲದೇ ಮಹಿಳೆಯರ ಕೈ ಸೇರಿದೆ. ಉಜ್ವಲ ಗ್ಯಾಸ್ ಯೋಜನೆ, ಸಬ್ಸಿಡಿ, 10 ಕೆಜಿ ಉಚಿತ ಅಕ್ಕಿ ಯೋಜನೆ, ವಿಶ್ವಕರ್ಮ ಯೋಜನೆಗಳು ಜನಮಾನಸದಲ್ಲಿ ಉಳಿದಿವೆ. ಇಂಥ 300 ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ, ಪ್ರಚಾರ ಮಾಡುವ ಮೂಲಕ ಮತ್ತೇ ಬಿಜೆಪಿಯನ್ನು ಕ್ಷೇತ್ರದಲ್ಲಿ ಗೆಲ್ಲಿಸಲು ಎಲ್ಲರು ಶ್ರಮಿಸಲು ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಲೋಕಸಭಾ ಕ್ಷೇತ್ರದ ಸಂಚಾಲಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಮೈಸೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಆರ್. ಮಹದೇವಸ್ವಾಮಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ. ವೃಷಬೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ಮುಖಂಡರಾದ ಎಂ. ರಾಮಚಂದ್ರ, ಜಿ.ನಾಗಶ್ರೀಪ್ರತಾಪ್, ಜಿಲ್ಲಾ ಕಾರ್ಯದರ್ಶಿ ನಟರಾಜು, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್,ಸಹ ವಕ್ತಾರ ಮಂಜುನಾಥ್, ಜಿಲ್ಲಾ ಮಾಧ್ಯಮ ಪ್ರಮುಖ್ ವಿರೇಂದ್ರ, ಎಸ್. ಬಾಲಸುಬ್ರಮಣ್ಯ, ಕುಮುದ, ಶಾಂತಮೂರ್ತಿ, ಕೆರೆಹಳ್ಳೀ ಮಹದೇವಸ್ವಾಮಿ, ಕೂಸಣ್ಣ, ರಾಜು, ಮೊದಲಾದವರು ಇದ್ದರು.