ಗುಜರಾತ್ ನ ಪ್ರೇರಣಾ ಕಾರ್ಯಕ್ರಮಕ್ಕೆ ಎಂಸಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಧ್ರುವಕುಮಾರ್ ಆಯ್ಕೆ

ಚಾಮರಾಜನಗರ: ನಗರದ ಸೋಮವಾರಪೇಟೆಯ ಎಂ.ಸಿ.ಎಸ್ ಪಬ್ಲಿಕ್ ಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಧ್ರುವಕುಮಾರ್ ಮಾನವ ಸಂಪನ್ಮೂಲ ಕೇಂದ್ರ ಸಚಿವಾಲಯ ದೆಹಲಿ ಆಯೋಜಿಸುವ ಪ್ರೇರಣಾ ಕಾರ್ಯಕ್ರಮದಡಿಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಗುಜರಾತ್ ರಾಜ್ಯದಲ್ಲಿ ನಡೆಯುವ ಪ್ರೇರಣಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದು, ಇಂದು ಗುಜರಾತ್ ನ ವಾದನಗರಕ್ಕೆ ಪ್ರಯಾಣ ಬೆಳಸಲಿದ್ದಾರೆ. ಈ ಕಾರ್ಯಕ್ರಮವು ವ್ಯಕ್ತಿತ್ವ ವಿಕಸನ, ವಿವಿಧತೆಯಲ್ಲಿ ಏಕತೆ, ವೈವಿಧ್ಯತೆಗೆ ಗೌರವ ಮುಂತಾದ ಹಿನ್ನೆಲೆಯನ್ನು ಹೊಂದಿದ್ದು, ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು,
ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ಸಿಬ್ಬಂದಿವರ್ಗದವರು, ವಿದ್ಯಾರ್ಥಿ ವೃಂದ ಶುಭಾಶಯ ಕೋರಿದ್ದಾರೆ.

Leave a Reply

Your email address will not be published. Required fields are marked *