ವೈದ್ಯ ದಂಪತಿಗೆ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ

ಚಾಮರಾಜನಗರ: ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವ ಡಾ.ಮಹೇಶ್, ಡಾ.ಭಾರತೀ ದಂಪತಿಯನ್ನು ಗಡಿನಾಡು ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಬಡ ರೋಗಿಗಳಿಗೆ ಉತ್ತಮ ಸೇವೆ ಒದಗಿಸುತ್ತಾ, ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರರಾಗಿರುವ ಇವರನ್ನು ಗಡಿನಾಡು ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಗುರುತಿಸಿ ಡಾ.ಮಹೇಶ್ ಹಾಗೂ ಡಾ.ಭಾರತೀ ದಂಪತಿಗೆ ಗಡಿನಾಡ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿಯನ್ನು ವೇದಿಕೆ ಅಧ್ಯಕ್ಷ ಚಾ.ರಂ.ಕುಮಾರ್ ನೀಡುವ ಮೂಲಕ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಆಟೋ ನಾಗೇಶ್, ಸಂಘದ ಸದಸ್ಯರು ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *