ಚಾಮರಾಜನಗರ : ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ, ಪ್ರಾಥಮಿಕ ಆರೋಗ್ಯ ಸುರಕ್ಷತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್‌ಕುಮಾರ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ.ಸುಂದರೇಶ್ ಅವರ ಮುಖಾಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್‌ರಂಜನಂಪಾಂಡೆಗೆ ಅವರಿಗೆ ಮನವಿ ಸಲ್ಲಿಸಲಾಯಿತು.
ಸಮುದಾಯ ಆರೋಗ್ಯ ಅಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ಮುಷ್ಕರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿ ಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷತ ಅಧಿಕಾರಿಗಳ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಕೂಡಲೇ ಅವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್‌ಕುಮಾರ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ.ಸುಂದರೇಶ್ ಅವರ ಮುಖಾಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳ ಸಂಘ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳ ಸಂಘ ಅಧ್ಯಕ್ಷ ಸ್ವಾಮಿ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಖಜಾಂಚಿ ಲೋಕೇಶ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳ ಸಂಘದ ಅಧ್ಯಕ್ಷೆ ಮಮತ, ಪ್ರಧಾನ ಕಾರ್ಯದರ್ಶಿ ಭಾಗ್ಯ, ಖಜಾಂಚಿ ಲತಾ ಹಾಗೂ ಜಿಲ್ಲೆಯ ಎಲ್ಲ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಆರೋಗ್ಯ ಸುರಕ್ಷಣಾ ಅಧಿಕಾರಿಗಳು ಹಾಜರಿದ್ದರು.