ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖಾ ವತಿಯಿಂದ ಜಿಲ್ಲಾ ರೈತ ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಮಟ್ಟದ ಹಾಲು ಕರೆಯುವ ಸ್ಪರ್ಧೆ ಮತ್ತು ಜಿಲ್ಲಾ ಶ್ವಾನ ಪ್ರದರ್ಶನ ಸ್ಪರ್ಧೆಯನ್ನು ಅಕ್ಟೋಬರ್ 17ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಾಲು ಕರೆಯುವ ಸ್ಪರ್ಧೆಯು ಸಂಜೆ 4.30 ಗಂಟೆಗೆ ನಡೆಯಲಿದ್ದು, ವಿಜೇತರಿಗೆ ಪ್ರಥಮ ಬಹುಮಾನವಾಗಿ 20 ಸಾವಿರ ರೂ., ದ್ವಿತೀಯ ಬಹುಮಾನವಾಗಿ 15 ಸಾವಿರ ರೂ., ತೃತೀಯ ಬಹುಮಾನವಾಗಿ 10 ಸಾವಿರ ರೂ. ನೀಡಲಾಗುವುದು.
ಶ್ವಾನ ಪ್ರದರ್ಶನ ಸ್ಪರ್ಧೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ವಿಜೇತರಾದ ಶ್ವಾನಗಳಿಗೆ ವಿಶೇಷ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶುವೈದ್ಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.
ಜಿಲ್ಲೆಯ ಆಸಕ್ತ ಪಶುಪಾಲಕರು ಮತ್ತು ಶ್ವಾನ ಪಾಲಕರು/ಶ್ವಾನ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.