ಸಚಿವ ಸಿ.ಪುಟ್ಟರಂಗಶೆಟ್ಟಿಗೆ ಹುಲಿಕಲ್ ನಟರಾಜು ಅವರಿಂದ ಸನ್ಮಾನ

ಚಾಮರಾಜನಗರ: ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಖಾತೆ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರನ್ನು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ರಾಜ್ಯ ಅಧ್ಯಕ್ಷ ಹುಲಿಕಲ್ ನಟರಾಜು ಸನ್ಮಾನಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಸಚಿವರಿಗೆ ಹಾರಹಾಕಿ, ವೈಜ್ಞಾನಿಕ ಸಂಬಂಧಪಟ್ಟ ಪುಸ್ತಕ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಮಂಜುನಾಥ ಸ್ವಾಮಿ, ಜಿಲ್ಲಾಧ್ಯಕ್ಷ ಕಿರಣ್ ರಾಜ್,  ಜಿಲ್ಲಾ ಕಾರ್ಯದರ್ಶಿ ನಂಜುಂಡಸ್ವಾಮಿ, ಮಹಾದೇವಸ್ವಾಮಿ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *